ಚಿತ್ರದುರ್ಗ| ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ಅಮೃತ ಮಹೋತ್ಸವ ಸಮಾರೋಪ ನಾಳೆ: ರಾಜೇಶ್ ಕೃಷ್ಣನ್ ಸಂಗೀತ ಸಂಜೆ.

ಚಿತ್ರದುರ್ಗ ನ. 28

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ನಗರದ ಪ್ರತಿಷ್ಠಿತ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತದ ಅಮೃತ ಮಹೋತ್ಸವದ ಕೃತಜ್ಞತಾ ಪರ್ವದ ಅಂಗವಾಗಿ ನ. 29ರ ಭಾನುವಾರ ಸಂಜೆ 6.ಕ್ಕೆ ಹಳೇ ಮಾಧ್ಯಮಿಕ ಶಾಲಾ ಮೈದಾನ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬ್ಯಾಂಕ್‍ನ ಮುಖ್ಯ ಕಾರ್ಯ ನಿರ್ವಹಕಾ ಧಿಕಾರಿ ಕೆ.ಆರ್.ಮಲ್ಲಿಕಾರ್ಜನ್ ತಿಳಿಸಿದ್ದಾರೆ.

ಸಂಜೆ 6 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಉದ್ಘಾಟಿಸಲಿದ್ದಾರೆ. ಬ್ಯಾಂಕಿನ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನವನ್ನು ಸಹಕಾರ ಖಾತೆಯ ಮಾಜಿ ಸಚಿವರಾದ ಕೆ.ಎನ್.ರಾಜಣ್ಣ ನಡೆಸಿಕೊಡ ಲಿದ್ದಾರೆ. ಸದಸ್ಯರಿಗೆ ನೆನಪಿನ ಕಾಣಿಕೆಯನ್ನು ಮಾಜಿ ಉಪ ಮುಖ್ಯ ಮಂತ್ರಿಗಳು ಸಂಸದರಾದ ಗೋವಿಂದ ಎಂ. ಕಾರಜೋಳ ವಿತರಣೆ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಹೊಳಲ್ಕೆರೆ ಶಾಸಕರಾದ ಡಾ.ಎಂ. ಚಂದ್ರಪ್ಪ, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್ ಆದಿಜಾಂಬವ ಅಭಿವೃದ್ಧಿ ನಿಗಮದ ಅದ್ಯಕ್ಷರಾದ ಜಿ.ಎಸ್.ಮಂಜುನಾಥ್ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷರಾದ ಎಸ್. ಆರ್.ಲಕ್ಷ್ಮೀಕಾಂತ ರೆಡ್ಡಿ ಭಾಗವಹಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ರಘುರಾಮ ರೆಡ್ಡಿ ವಹಿಸಲಿದ್ದಾರೆ. ಸಮಾರೋಪ ಸಮಾರಂಭದ ನಂತರ ರಾಜೇಶ್ ಕೃಷ್ಣನ್ ಮತ್ತು ತಂಡ, ಬೆಂಗಳೂರು, ಇವರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ.

ನ. 29ರ ಬೆಳಿಗ್ಗೆ 10ಕ್ಕೆ ಹಳೇ ಮಾಧ್ಯಮಿಕ ಶಾಲಾ ಮೈದಾನ ಆವರಣದಲ್ಲಿ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತದ ಅಮೃತ ಮಹೋತ್ಸವದ ಕೃತಜ್ಞತಾ ಪರ್ವದ ಅಂಗವಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಬ್ಯಾಂಕ್ ಪ್ರಾರಂಭವಾಗಿ 75 ವರ್ಷ ಆದ ಸವಿನೆನಪಿಗಾಗಿ 75 ಯೂನಿಟ್ ರಕ್ತವನ್ನು ಸಂಗ್ರಹ ಮಾಡುವ ಗುರಿಯನ್ನು ಹೊಂದಲಾಗಿದೆ ಈ ಹಿನ್ನಲೆಯಲ್ಲಿ ರಕ್ತವನ್ನು ದಾನ ಮಾಡುವ ದಾನಿಗಳು ಆಗಮಿಸಿ ರಕ್ತವನ್ನು ದಾನ ಮಾಡುವಂತೆ ಮನವಿ ಮಾಡಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *