
MI vs GG Live Score, WPL 2023: ಮುಂಬೈನ ಬ್ರಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲೂ ಜಯ ಸಾಧಿಸಿ ಗೆಲುವಿನ ನಾಗಾಲೋಟದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಪ್ರಸ್ತುತ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು 4 ಪಂದ್ಯಗಳಲ್ಲಿ 2 ಗೆಲುವು ಹಾಗೂ 2 ಸೋಲನುಭವಿಸಿರುವ ಗುಜರಾತ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಹೀಗಾಗಿ ಮುಂದಿನ ಹಂತದ ಆಸೆಯನ್ನು ಜೀವಂತವಿರಿಸಿಕೊಳ್ಳಲು ಗುಜರಾತ್ ಜೈಂಟ್ಸ್ ತಂಡವು ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ ಉಭಯ ತಂಡಗಳಿಂದ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಧಾರಾ ಗುಜ್ಜರ್, ಅಮೆಲಿಯಾ ಕೆರ್, ಇಸ್ಸಿ ವೊಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್, ಸೋನಮ್ ಯಾದವ್, ನೀಲ್ ಬಿಶ್ತ್, ಪ್ರಿಯಾಂಕಾ ಬಾಲಾ, ಪೂಜಾ ವಸ್ತ್ರಾಕರ್, ಹೀದರ್ ಗ್ರಹಾಂ, ಕ್ಲೋಯ್ ಟ್ರಯಾನ್.
ಗುಜರಾತ್ ಜೈಂಟ್ಸ್ ತಂಡ: ಸಬ್ಬಿನೇನಿ ಮೇಘನಾ, ಲಾರಾ ವೊಲ್ವಾರ್ಡ್, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಜಾರ್ಜಿಯಾ ವೇರ್ಹ್ಯಾಮ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಕಿಮ್ ಗಾರ್ತ್, ತನುಜಾ ಕನ್ವರ್, ಸ್ನೇಹ್ ರಾಣಾ(ನಾಯಕಿ), ಮಾನ್ಸಿ ಜೋಶಿ, ಸೋಫಿಯಾ ಡಂಕ್ಲೆ, ಅಶ್ವನಿಕಾ ಪಟೇಲ್, ಮೋನಿಕಾ ಪಟೇಲ್ ಕುಮಾರಿ, ಹರ್ಲಿ ಗಾಲಾ, ಶಬ್ನಮ್ ಎಂಡಿ ಶಕಿಲ್, ಪರುನಿಕಾ ಸಿಸೋಡಿಯಾ, ಅನ್ನಾಬೆಲ್ ಸದರ್ಲ್ಯಾಂಡ್.
Views: 0