
16ನೆ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಮಹತ್ವದ ಪಂದ್ಯ ನಡೆಯುತ್ತಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ (MI vs GT) ಮುಖಾಮುಖಿ ಆಗಿವೆ. ಮುಂಬೈ 11 ಪಂದ್ಯಗಳನ್ನು ಆಡಿದ್ದು ಆರು ಜಯ, ಐದು ಪಂದ್ಯಗಳಲ್ಲಿ ಸೋಲುಂಡು 12 ಅಂಕ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಜಿಟಿ ಈವರೆಗೆ ಆಡಿರುವ 11 ಪಂದ್ಯಗಳ ಪೈಕಿ ಕೇವಲ ಮೂರರಲ್ಲಿ ಸೋಲು, 8 ರಲ್ಲಿ ಗೆಲುವು ಸಾಧಿಸಿ 16 ಅಂಕ ಪಡೆದು ಅಗ್ರಸ್ಥಾನದಲ್ಲಿದೆ. ಹೀಗಾಗಿ ಗುಜರಾತ್ ಇಂದಿನ ಪಂದ್ಯ ಗೆದ್ದರೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಆಗಲಿದೆ.