

ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದಿನ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸುತ್ತಿದೆ. ಈ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವಿನ ಅನಿವಾರ್ಯತೆ ಎದುರಾಗಿದೆ. ಆದರೆ ಸೋತ ತಂಡಕ್ಕೆ ಪ್ಲೇಆಫ್ ಹಾದಿ ದುರ್ಘಮವಾಗಲಿದೆ.ಎರಡೂ ತಂಡಗಳು ಇಲ್ಲಿಯವರೆಗೆ ತಲಾ 10 ಪಂದ್ಯಗಳನ್ನು ಆಡಿದ್ದು, ಎರಡೂ ತಂಡಗಳು 10 ಅಂಕಗಳನ್ನು ಹೊಂದಿವೆ. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಸೋಲು ಕಂಡರೆ, ಪ್ಲೇಆಫ್‌ಗೆ ಹೋಗಲು ನಂತರದ ಪ್ರತಿ ಪಂದ್ಯದಲ್ಲೂ ಗೆಲ್ಲಲೇಬೇಕು.