
Pahalgam Terrorist Attack: ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಸಂಭವಿಸಿದ ದುರಂತದಲ್ಲಿ ಶಿವಮೊಗ್ಗದ ವಿಜಯನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಉಗ್ರರ ಗುಂಡೇಟಿಗೆ ಮೃತಪಟ್ಟಿದ್ದಾರೆ. ಪತ್ನಿ ಮತ್ತು ಪುತ್ರನೊಂದಿಗೆ ಮಂಜುನಾಥ್ ಏ.19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಪಹಲ್ಗಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಂಡಿನ ಸದ್ದು ಕೇಳಿದ ತಕ್ಷಣ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಘಟನೆ ನಡೆದ ಸ್ಥಳಕ್ಕೆ ಕಾಲ್ನಡಿಗೆ ಅಥವಾ ಕುದುರೆಯ ಮೂಲಕ ಮಾತ್ರ ಹೋಗಲು ಸಾಧ್ಯ. ಹೀಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಿಧಾನವಾಗಿಸಿವೆ.
ಹೈಲೈಟ್ಸ್:
- ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ
- ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ
- ಭದ್ರತಾ ಪಡೆಗಳಿಂದ ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರ: ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಸಂಭವಿಸಿದ ದುರಂತದಲ್ಲಿ ಶಿವಮೊಗ್ಗದ ವಿಜಯನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಉಗ್ರರ ಗುಂಡೇಟಿಗೆ ಮೃತಪಟ್ಟಿದ್ದಾರೆ. ಪತ್ನಿ ಮತ್ತು ಪುತ್ರನೊಂದಿಗೆ ಮಂಜುನಾಥ್ ಏ.19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು.
ಪಹಲ್ಗಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಂಡಿನ ಸದ್ದು ಕೇಳಿದ ತಕ್ಷಣ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಘಟನೆ ನಡೆದ ಸ್ಥಳಕ್ಕೆ ಕಾಲ್ನಡಿಗೆ ಅಥವಾ ಕುದುರೆಯ ಮೂಲಕ ಮಾತ್ರ ಹೋಗಲು ಸಾಧ್ಯ. ಹೀಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಿಧಾನವಾಗಿಸಿವೆ.
ಮೋದಿಗೆ ಹೋಗಿ ಹೇಳು…
‘ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಪತ್ನಿ ಪಲ್ಲವಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ‘ನಾವು ಏಪ್ರಿಲ್ 19 ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದೆವು. ಇದು ಗುಡ್ಡಗಾಡು ಪ್ರದೇಶವಾದ್ದರಿಂದ, ಪ್ರವಾಸಿಗರು ಕಣಿವೆಯ ಮೂಲಕ ಹಾದುಹೋಗಲು ಕುದುರೆಗಳನ್ನು ಬಾಡಿಗೆಗೆ ಪಡೆಯಬೇಕಾಯಿತು. ಕೆಲವು ದಿನಗಳವರೆಗೆ ಎಲ್ಲವೂ ಸಾಮಾನ್ಯವಾಗಿತ್ತು. ಆದರೆ ಇಂದು, ದುರಂತ ಘಟನೆ ಸಂಭವಿಸಿದೆ. ನನ್ನ ಮಗನಿಗೆ ತಿಂಡಿ ತಿನ್ನಲು ಆಸೆ ಇತ್ತು. ಆದ್ದರಿಂದ, ನನ್ನ ಪತಿ ಅದನ್ನು ಖರೀದಿಸಲು ಯಾವುದೋ ಅಂಗಡಿಗೆ ಹೋದರುʼ ಎಂದು ತಿಳಿಸಿದರು.
‘ಆರಂಭದಲ್ಲಿ ನಮಗೆ ಗುಂಡಿನ ಶಬ್ದ ಕೇಳಿಸಿತು. ಕಣಿವೆಯಲ್ಲಿ ಪೊಲೀಸರು ಕೆಲವು ಪರೀಕ್ಷೆಗಳನ್ನು ಮಾಡುತ್ತಿದ್ದಾರೆ ಎಂದು ನಾವು ಭಾವಿಸಿದ್ದೆವು. ಆದರೆ ನಾನು ನನ್ನ ಪತಿಯನ್ನು ನೋಡಿದಾಗ, ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಗ ಸಹ ಪ್ರವಾಸಿಗರು ‘ಭಾಗೋ ಭಾಗೋ’ ಎಂದು ಕೂಗಲು ಪ್ರಾರಂಭಿಸಿದರು. ಸದ್ಯ ನಾನೀಗ ನಾನು ಫಲ್ಟಾಮ್‌ನಲ್ಲಿರುವ ಜನರಲ್ ಆಸ್ಪತ್ರೆಯಲ್ಲಿ ಇದ್ದೇನೆ.ʼ
‘ನಮ್ಮಿಬ್ಬರ ಮೇಲೂ ಗುಂಡು ಹಾರಿಸಲು ನಾನು ಉಗ್ರಗಾಮಿಗಳಿಗೆ ಕೇಳಿದೆ. ಅವರು ಮೋದಿ ಜಿ ಕೋ ಬಟಾವೋ (ಮೋದಿಗೆ ಹಾಗೆ ಮಾಡಲು ಹೇಳು) ಎಂದು ಹೇಳಿದರು. ನಾನು ಇನ್ನೂ ಆಘಾತದಲ್ಲಿದ್ದೇನೆʼ ಎಂದು ಹೇಳಿದರು.
ಮಾಹಿತಿ ಪಡೆದ ಪ್ರಧಾನಿ ಮೋದಿ
ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಿದ್ದಾರೆ.
ಘಟನೆ ನಡೆದ ಪಹಲ್ಗಾಮ್ ಪ್ರದೇಶವನ್ನು ‘ಮಿನಿ ಸ್ವಿಟ್ಜರ್ಲೆಂಡ್ʼ ಎಂದೂ ಕರೆಯುತ್ತಾರೆ. ದಾಳಿಯ ನಂತರ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡ ಪ್ರವಾಸಿಗರ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ಗಾಯದ ಪ್ರಮಾಣ ಇನ್ನೂ ತಿಳಿದಿಲ್ಲ.
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದು, ‘ಘಟನೆಯಿಂದ ನಾನು ಆಘಾತಗೊಂಡಿದ್ದೇನೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆʼ ಎಂದು ಹೇಳಿದ್ದಾರೆ. ಬಿಜೆಪಿ ನಾಯಕ ರವೀಂದ್ರ ರೈನಾ ಅವರು ಪಾಕಿಸ್ತಾನದ ಭಯೋತ್ಪಾದಕರು ಈ ಕೃತ್ಯದ ಹಿಂದೆ ಇದ್ದಾರೆ ಎಂದು ಆರೋಪಿಸಿದ್ದಾರೆ. ಭಯೋತ್ಪಾದಕರಿಗೆ ಸಹಾಯ ಮಾಡಿದವರನ್ನೂ ಶಿಕ್ಷಿಸಲಾಗುವುದು ಎಂದು ಹೇಳಿದ್ದಾರೆ.
‘ಗಾಯಗೊಂಡ 12 ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರ ಸ್ಥಿತಿಯೂ ಸ್ಥಿರವಾಗಿದೆ. ಗಾಯಗೊಂಡವರನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯರು ಗಾಯಗೊಂಡವರನ್ನು ಕುದುರೆಗಳ ಮೇಲೆ ಕರೆತಂದಿದ್ದಾರೆʼ ಎಂದು ಪಹಲ್ಗಾಮ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
Source : Vijayakarnataka
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1