ಒಳ ಮೀಸಲಾತಿ ಜಾರಿಗೊಳಿಸಲು ಮಿನಾಮೇಷ 

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಎಣಿಸುತ್ತಿರುವ  ಸರ್ಕಾರ ತನ್ನ ನಿಲುವು ಬದಲಿಸಿ ನ್ಯಾ. ನಾಗಮೋಹನ್ ದಾಸ್ ವರದಿಯನ್ವಯ ಶೀಘ್ರವೇ ಒಳ ಮೀಸಲಾತಿ ಜಾರಿಗೆ ತರುವಂತೆ ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರ ನೇತೃತ್ವದ ನಿಯೋಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿ.ಕೆ ಶಿವಕುಮಾರ್ ಅವರನ್ನು  ಬೆಂಗಳೂರಿನಲ್ಲಿ ಭೇಟಿ ಮಾಡಿ ಆಗ್ರಹಿಸಿತು.

ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಕಳೆದ ಮೂರು ದಶಕಗಳಿಂದ ಮಾದಿಗ ಸಮುದಾಯ ನಡೆಸುತ್ತಿರುವ ಹೋರಾಟ ಹಾಗೂ ಒಳ ಮೀಸಲು ನೀಡದೆ ಇರುವುದರಿಂದ ಸಮುದಾಯಕ್ಕೆ ಆಗುತ್ತಿರುವ ತಾರತಮ್ಯದ ಕುರಿತು ವಿವರಿಸಿದ ಶ್ರೀಗಳು ಯಾವುದೇ ಒತ್ತಡಕ್ಕೆ ಮಣಿಯದೆ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದರು, ಸ್ವಾಮೀಜಿಯವರ ಮನವಿಗೆ ಸ್ಪಂದಿಸಿದ  ಸಿ,ಎಂ ಹಾಗೂ ಡಿ ಸಿ ಎಂ  ಸರ್ಕಾರ ಸಾಮಾಜಿಕ ನ್ಯಾಯದ ಪರವಿದೆ ಹೀಗಾಗಿ ಒಳ ಮೀಸಲಾತಿ ಜಾರಿ ಮಾಡುವುದು ಶತಸಿದ್ದ  ಎಂದು ಭರವಸೆ ನೀಡಿದರು.

ನಿಯೋಗದಲ್ಲಿ  ಮಾಜಿ ಸಂಸತ್ ಸದಸ್ಯರಾದ ಬಿ ಎನ್ ಚಂದ್ರಪ್ಪ ಮಾಜಿ ರಾಜ್ಯಸಭಾ ಸದಸ್ಯರಾದ ಡಾ. ಎಲ್ ಹನುಮಂತಯ್ಯ, ಮಾದಿಗ ಸಮುದಾಯದ ಕೆಲವು ಮುಖಂಡರು ಇದ್ದರು.

Views: 10

Leave a Reply

Your email address will not be published. Required fields are marked *