ಎಂ ಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ .ಮಾತು ಕೊಟ್ಟಂತೆ ಜುಲೈ ೧ರಿಂದ ಯೋಜನೆ ಜಾರಿ ಆಗುತ್ತೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಮುಂದೆ 8 ಕೆಜಿ ಅಕ್ಕಿ ಎರಡು ಕೆಜಿ ರಾಗಿ ಅಥವಾ ಜೋಳ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದರು.
ನಗರದಲ್ಲಿ ಮಾತನಾಡಿದ ಸಚಿವ ಮುನಿಯಪ್ಪ, “ಪಡಿತರರ ಅಕೌಂಟ್ ಗೆ ಹಣ ರವಾನೆಯಾಗುತ್ತದೆ. ಶೇ. 90 ಅಕೌಂಟ್ ಇರುವ ಬಗ್ಗೆ ಮಾಹಿತಿ ಇದೆ. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ವರ್ಗಾವಣೆಯಾಗಲಿದೆ. ಬಳಿಕ ಅಕ್ಕಿ ಕೊಡುತ್ತೇವೆ. ಸಿಎಂ ಕೂಡ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ ರಾಗಿ ಕೊಡುತ್ತೇವೆ. ಉತ್ತರ ಕರ್ನಾಟಕ ಭಾಗಕ್ಕೆ ಜೋಳ ಕೊಡುತ್ತೇವೆ. ರಾಗಿ ದಾಸ್ತಾನು ಇದೆ. ಜೋಳ ದಾಸ್ತಾನು ಇಲ್ಲ. ದಾಸ್ತಾನು ಆದ ಬಳಿಕ ಧಾನ್ಯಗಳ ಹಂಚಿಕೆ ಮಾಡುತ್ತೇವೆ” ಎಂದು ವಿವರಿಸಿದರು.
ಎಂ ಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ .ಮಾತು ಕೊಟ್ಟಂತೆ ಜುಲೈ ೧ರಿಂದ ಯೋಜನೆ ಜಾರಿ ಆಗುತ್ತೆ. ಕೇಂದ್ರ ಸರ್ಕಾರ ಮನಸ್ಸು ಬದಲಾಯಿಸಿ ಅಕ್ಕಿ ಕೊಟ್ಟರೆ ಹಂಚಿಕೆ ಮಾಡುತ್ತೇವೆ. ಕೇಂದ್ರದ ಬಳಿ ಅಕ್ಕಿ ದಾಸ್ತಾನು ಇದೆ. ಇಲ್ಲವೆ ಟೆಂಡರ್ ಕರೆದು ಅಕ್ಕಿ ಖರೀದಿ ಮಾಡುತ್ತೇವೆ. ಹಣ ರೆಡಿ ಇದೆ. ಅಕೌಂಟ್ ಗೆ ವರ್ಗಾವಣೆ ಆಗಲಿದೆ. ನಾಳೆಯಿಂದ ಅಕೌಂಟ್ ಗೆ ಹಣ ಹೋಗುತ್ತೆ. ಅನ್ನಭಾಗ್ಯ ಯೋಜನೆಗೆ ಸಮಾವೇಶ ನಡೆಸುವ ಅವಶ್ಯಕತೆ ಇಲ್ಲ” ಎಂದರು.