
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಮಾ.27): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2022-23ನೇ ಸಾಲಿನ ವಿವಿಧ ಯೋಜನೆಗಳಡಿ ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು.
ನಗರದ ತರಾಸು ರಂಗಮಂದಿರದ ಆವರಣದಲ್ಲಿ ಸೋಮವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 9 ಮಂದಿ ಅಂಗವಿಕಲ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸಲಾಯಿತು.
ಯಂತ್ರಚಾಲಿತ ದ್ವಿಚಕ್ರ (ರೆಟ್ರೋಫಿಟ್‍ಮೆಂಟ್ ಸಹಿತ) ಯೋಜನೆಯಡಿ 4 ಮಂದಿ ದೈಹಿಕ ಅಂಗವಿಕಲತೆ ಹೊಂದಿರುವ ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ ಯೋಜನೆಯಡಿ 3 ಮಂದಿ ಶ್ರವಣದೋಷ ಅಂಗವಿಕಲತೆ ಹೊಂದಿರುವ ಅಂಗವಿಕಲರಿಗೆ ಹೊಲಿಗೆಯಂತ್ರ ಹಾಗೂ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆಯಡಿ ಇಬ್ಬರು ದೃಷ್ಠಿದೋಷ ಹೊಂದಿರುವ ಅಂಗವಿಕಲರಿಗೆ ಟಾಕಿಂಗ್ ಲ್ಯಾಪ್‍ಟಾಪ್‍ಅನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಎಂಆರ್‍ಡಬ್ಲ್ಯೂ ಮೈಲಾರಪ್ಪ ಸೇರಿದಂತೆ ಅಂಗವಿಕಲ ಫಲಾನುಭವಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ತರಾಸು ರಂಗಮಂದಿರದ ಆವರಣದಲ್ಲಿ ಸೋಮವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಗವಿಕಲ ಫಲಾನುಭವಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ ಹಾಗೂ ಟಾಕಿಂಗ್ ಲ್ಯಾಪ್‍ಟಾಪ್ ಸೌಲಭ್ಯ ವಿತರಿಸಿದರು.
The post ದ್ವಿಚಕ್ರ ವಾಹನ, ಹೊಲಿಗೆಯಂತ್ರ, ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/hECaSNA
via IFTTT