ಶುದ್ಧ ಕುಡಿಯುವ ನೀರಿನ ಘಟಕಗಳ ಭೂಮಿ ಪೂಜೆ ನೆರವೇರಿಸಿದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ತಾಲೂಕಿನ ಗೋಡಬನಹಾಳ್, ಚೆನ್ನಯ್ಯನಟ್ಟಿ ಹಾಗೂ ಚಿಕ್ಕಪುರ ಗೋಲರಹಟ್ಟಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಭೂಮಿ ಪೂಜೆ

“ಕ್ಷೇತ್ರದ ಅಭಿವೃದ್ಧಿಯೇ ನಮ್ಮ ಮೂಲ ಉದ್ದೇಶ” – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಚಿತ್ರದುರ್ಗ, ಜುಲೈ 03: ಮೂಲಭೂತ ಸೌಕರ್ಯಗಳಲ್ಲಿ ಪ್ರಮುಖವಾದ ಕುಡಿಯುವ ನೀರು, ವಿದ್ಯುತ್, ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಶಾಸಕನಾಗಿ ನನ್ನ ಮೇಲಿದೆ. ಆದ್ದರಿಂದ ಗ್ರಾಮಗಳಲ್ಲಿ ಮೊದಲ ಆದ್ಯತೆಯಾಗಿ ಇಂತಹ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದರು.

ತಾಲೂಕಿನ ಗೋಡಬನಹಾಳ್, ಚೆನ್ನಯ್ಯನಟ್ಟಿ ಹಾಗೂ ಚಿಕ್ಕಪುರ ಗೋಲರಹಟ್ಟಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಲ್ಲದೆ, ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಕೊರತೆ ಇರುವುದನ್ನು ಗಮನಿಸಿ, ಅವುಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕ್ಷೇತ್ರದ ಜನರಿಗೆ ಅತ್ಯವಶ್ಯಕವಾದ ಅಭಿವೃದ್ಧಿ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಈಗಾಗಲೇ ಸಿ.ಸಿ. ರಸ್ತೆಗಳು, ಕುಡಿಯುವ ನೀರಿನ ಬೋರ್‌ವೆಲ್‌ಗಳು, ವಿದ್ಯುತ್ ಸಂಪರ್ಕ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಕ್ಷೇತ್ರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಇನ್ನೂ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಮುಂದಿನ ದಿನಗಳಲ್ಲಿ ಅವುಗಳಿಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಅಧಿಕಾರದಲ್ಲಿರುವ ಸಂದರ್ಭದಲ್ಲಿ ಜನರಿಗೆ ಉಪಯುಕ್ತವಾಗುವ ಕೆಲಸಗಳನ್ನು ಮಾಡಿದಾಗ ಮಾತ್ರ ಶಾಶ್ವತವಾದ ಹೆಸರು ಉಳಿಯುತ್ತದೆ. ಅಂತಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಾನು ಸದಾ ಕಂಕಣ ಬದ್ಧನಾಗಿರುತ್ತೇನೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರವು ಬಹುತೇಕ ಗಣಿಪೀಡಿತ ಪ್ರದೇಶಗಳನ್ನು ಒಳಗೊಂಡಿದ್ದು, ಆ ಭಾಗದ ಸಮಗ್ರ ಅಭಿವೃದ್ಧಿಗೆ ಡಿ.ಎಂ.ಎಫ್. ನಿಧಿಯನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುವುದು ಎಂದು ಹೇಳಿದರು.

ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಗ್ರಾಮಸ್ಥರು ವಿವಿಧ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದರು. ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿದ ಶಾಸಕರು ಸಂಬAಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿ, ಮಳೆಗಾಲ ಆರಂಭವಾಗಿರುವುದರಿAದ ಚರಂಡಿಗಳನ್ನು ಸ್ವಚ್ಛಗೊಳಿಸಿ, ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡಬೇಕು ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಕೆಡಿಪಿ ಸದಸ್ಯ ಸಂತೋಷ್, ಆರ್.ಡಬ್ಲ್ಯೂ.ಎಸ್. ಮುಖ್ಯ ಇಂಜಿನಿಯರ್ ಶಿವಮೂರ್ತಿ, ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿ ಪಿಡಿಒ ಜೈಶೀಲಾ, ಕಾಂಗ್ರೆಸ್ ಮುಖಂಡರಾದ ಮಂಜಣ್ಣ, ಚಿತ್ತಪ್ಪ, ರಂಗಸ್ವಾಮಿ, ಹನುಮಂತಪ್ಪ, ಕೃಷ್ಣಪ್ಪ, ನಾಗರಾಜ್, ಹಾಲಿಜನ್, ಚಿಂದಾನAದಪ್ಪ, ವೀರೇಶ್, ಸತೀಶ್, ಮಹೇಶ್, ಸತೀಶ್ ಕುಮಾರ್, ನವೀನ್, ತಿಪ್ಪೇಶ್, ಮಂಜುನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *