ದಾವಣಗೆರೆ:2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷವನ್ನು ಗೆಲ್ಲಿಸಬೇಕೆಂದು ಸಿಎಂ ಅರವಿಂದ್ ಕೇಜ್ರಿವಾಲ್ ಪಣ ತೊಟ್ಟಿದ್ದಾರೆ. ಅದಕ್ಕಾಗಿ ರಾಜ್ಯ ಪ್ರವಾಸ ಶುರು ಮಾಡಿದ್ದಾರೆ. ಇಂದು ದಾವಣಗೆರೆಗೆ ಭೇಟಿ ನೀಡಿದ್ದು, ಬಿಜೆಪಿ ನಾಯಕರ ವಿರುದ್ದ ಹರಿಹಾಯ್ದಿದ್ದಾರೆ. ಮಾಡಾಳು ವಿರುಪಾಕ್ಷಪ್ಪ ವಿರುದ್ಧ ಕೆಂಡಕಾರಿದ್ದಾರೆ.
ಈ ಮೊದಲು 20% ಇತ್ತು ಬಳಿಕ 40% ಆಯ್ತು. ಮುಂದೆ 60% ಆಗುತ್ತೆ 100% ಕೂಡ ಆಗುತ್ತೆ. ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಬೇಕು ಎಂದು ವ್ಯಂಗ್ಯವಾಡಿದ್ದಾರೆ. ವಿರೂಪಾಕ್ಷಪ್ಪ ಮನೆಯಲ್ಲಿ ದಾಳಿ ನಡೆಸಿದಾಗ ಎಂಟು ಕೋಟಿ ರೂಪಾಯಿ ಹಣ ಸಿಕ್ಕಿದೆ. ಅವರಿಗೆ ಪ್ರಶಸ್ತಿ ನೀಡಲೇಬೇಕು. ಎಲ್ಲಾ ಹಣವನ್ನು ತಿಂದು ತೇಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಬೃಹತ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ ಸಾವಿರಾರು ಕೋಟಿ ತಿಂದಿದ್ದಾರೆ ಅಂತ ಬಿಜೆಪಿ ನಾಯಕರು ಆರೋಪ ಮಾಡಿದ್ದರು. ಆದ್ರೆ ಅವರ ಮನೆಯ ಮೇಲೆ ದಾಳಿ ಮಾಡಿದಾಗ ಸಿಕ್ಕಿದ್ದು ಕೇವಲ 10 ಸಾವಿರ. ಆದ್ರೆ ಬಿಜೆಪಿ ಶಾಸಕರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಸಿಕ್ಕಿರುವುದು ಎಂಟು ಕೋಟಿ ಹಣ ಎಂದು ವಾಗ್ದಾಳಿ ನಡೆಸಿದ್ದಾರೆ.
The post ಶಾಸಕ ಮಾಡಾಳು ವಿರುಪಾಕ್ಷಪ್ಪನಿಗೆ ಪದ್ಮಭೂಷಣ ಪ್ರಶಸ್ತಿ ಕೊಡಬೇಕು : ದೆಹಲಿ ಸಿಎಂ ಕಿಡಿ..! first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/IOFW4hM
via IFTTT