ಚಿತ್ರದುರ್ಗ, ಡಿ.14
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಅವರ ಮಾವನವರಾದ ಕೆ.ಟಿ. ತಿಪ್ಪೇಸ್ವಾಮಿ (64), ನಿವೃತ್ತ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕರು, ಇಂದು ಮಧ್ಯಾಹ್ನ 11.30ರ ಸುಮಾರಿಗೆ ಹೊಳಲ್ಕೆರೆ ತಾಲೂಕಿನ ಎನ್.ಜಿ.ಹಳ್ಳಿಯಲ್ಲಿ ನಿಧನರಾದರು.
ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಎನ್.ಎಚ್. ಹಳ್ಳಿಯಲ್ಲಿನ ಅವರ ಸ್ವಂತ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.