ಒಂದು ವಾರ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಭಾರಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಮೈಸೂರು, ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಕೊಡಗು ಹಾಗೂ ತುಮಕೂರು ಜಿಲ್ಲೆಗೆ ಶುಕ್ರವಾರ ಎಲ್ಲೊ ಅಲರ್ಟ್ ಸೂಚನೆ ನೀಡಲಾಗಿದೆ. ಅಲ್ಲದೆ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಕೆಲ ಸ್ಥಳಗಳಲ್ಲಿ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಶನಿವಾರ ಹೆಚ್ಚುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ದಕ್ಷಿಣ ಕನ್ನಡ, ಕೊಡಗು ಸೇರಿ ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಸೇರಿ ಎಂಟು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದೇ 20ರವರೆಗೂ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *