ಚಿತ್ರದುರ್ಗ ಸೆ. 16
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಜಿಲ್ಲಾ ಘಟಕ ಹಾಗೂ ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲವತಿಯಿಂದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ತಿಳಿಸಿದ್ದಾರೆ.
ಸೆ. 17 ರ ಬೆಳಿಗ್ಗೆ 10.30ಕ್ಕೆ ರಂಗಯ್ಯನ ಬಾಗಿಲು ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಜಿಲ್ಲಾ ಘಟಕದವತಿಯಿಂದ ನಡೆಸಲಾಗುವುದು, ಇದಾದ ನಂತರ ನಗರ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ರಕ್ತದಾನ ಶಿಬಿರವನ್ನು ಚಿತ್ರದುರ್ಗ ನಗರದ ಮುರುಘರಾಜೇಂದ್ರ ಆಟದ ಮೈದಾನದ ಎದುರು ಇರುವ ಬಂಜಾರ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷರಾದ ಕೆಟಿ ಕುಮಾರಸ್ವಾಮಿ, ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಮಂಡಲ ಅಧ್ಯಕ್ಷರು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Views: 110