ಸೇವಾ ಪಾಕ್ಷಿಕದ ಅಂಗವಾಗಿ ಚಿತ್ರದುರ್ಗದಲ್ಲಿ ಮೋದಿ ಜೀವನ ಪ್ರದರ್ಶನಕ್ಕೆ ಭವ್ಯ ಸಿದ್ಧತೆ.

ಚಿತ್ರದುರ್ಗ ಸೆ. 22

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಜಿಲ್ಲಾ ಬಿಜೆಪಿ ಘಟಕದ ವತಿಯಿಂದ “ಸೇವಾ ಪಾಕ್ಷಿಕ” ಅಭಿಯಾನದ ಪ್ರಯುಕ್ತ ಪ್ರಧಾನಿಗಳಾದ ನರೇಂದ್ರ ಮೋದಿ ಜೀ ರವರ ಜೀವನ ಆಧಾರಿತ ಪ್ರದರ್ಶನಿಯನ್ನು ಸೆ. 23 ರ ಮಂಗಳವಾರ ಬೆಳಿಗ್ಗೆ 9.30 ಕ್ಕೆ ನಗರದ ಒನಕೆ ಓಬವ್ವ (ಡಿಸಿ) ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಪ್ರದರ್ಶನಿಯ ಸಂಸದರಾದ ಗೋವಿಂದ ಕಾರಜೋಳ ರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್,ಮಾಜಿ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ,ಎಸ್ ಕೆ ಬಸವರಾಜನ್ಹಾ ಗೂ ನೇರಲಗುಂಟೆ ತಿಪ್ಪೇಸ್ವಾಮಿ ಜಿಲ್ಲಾ ಅಧ್ಯಕ್ಷರಾದ ಕೆ.ಟಿ.ಕುಮಾರ ಸ್ವಾಮಿ, ಮುಖಂಡರಾದ ಲಿಂಗಮೂರ್ತಿ ಹಾಗೂ ಜಿಲ್ಲಾ ಪದಾಧಿಕಾರಿಗಳು ಮಂಡಲದ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿ ಹಾಗೂ ಮೋರ್ಚಾ ಅಧ್ಯಕ್ಷರುಗಳು ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *