ಡಿ. 29ಕ್ಕೆ ಮಾಸಿಕ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ, ಡಿ, 26 ನಗರದ ಗಮಕ ಕಲಾಭಿಮಾನಿಗಳ ಸಂಘವು ನಡೆಸುತ್ತಿರುವ ಮಾಸಿಕ ಗಮಕ ವಾಚನ ವ್ಯಾಖ್ಯಾನ ಸಂಭ್ರಮದ 17ನೇ ಕಾರ್ಯಕ್ರಮವು ಇದೇ ತಿಂಗಳ 29ರ ಭಾನುವಾರ ಸಂಜೆ 6 ಗಂಟೆಗೆ ನಗರದ ಜೆ ಸಿ ಆರ್ ಬಡಾವಣೆಯ ಶ್ರೀ ಗಣಪತಿ ದೇವಾಲಯದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ

ಈ ಸಂದರ್ಭದಲ್ಲಿ ಕಲಾವಿದರಾದ ಮಲ್ಲಾಪುರ ಗೊಲ್ಲರಹಟ್ಟಿಯ ವೀರಣ್ಣ ವಾಚನ ಮಾಡಲಿದ್ದು ,ವ್ಯಾಖ್ಯಾನವನ್ನು ಚಿತ್ರದುರ್ಗ ಜಿಲ್ಲಾ
ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ, ಹುರುಳಿ .ಎಂ .ಬಸವರಾಜ ನೆರವೇರಿಸಲಿದ್ದಾರೆ . ದೇವಿ ಪುರಾಣದ “ಚಂಡಮುಂಡ”ರ
ಸಂಹಾರ ಎಂಬ ಪ್ರಸಂಗವನ್ನು ನಡೆಸಿಕೊಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರತ್ನಶ್ರೀ ರಾಜ್ಯ ಪ್ರಶಸ್ತಿ ವಿಜೇತರಾದ ಚಿತ್ರದುರ್ಗದ ಶ್ರೀಮತಿ ಸತ್ಯಪ್ರಭಾ ವಸಂತಕುಮಾರ್
ಭಾಗವಹಿಸಲಿದ್ದಾರೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲೆ, ಕಲಾವಿದರನ್ನು ಪ್ರೋತ್ಸಾಹಿಸಿ
ಯಶಸ್ವಿಗೊಳಿಸಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ. ಗೋಷ್ಟಿಯಲ್ಲಿ ರಾಮಣ್ಣ, ಫಕೀರಪ್ಪ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *