ಮಂಡ್ಯ: ಕಂಟೈನರ್​ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ.

ಮಂಡ್ಯ ಹೊರವಲಯದಲ್ಲಿ ಕಂಟೈನರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಂಡ್ಯ: ನಿಂತಿದ್ದ ಕಂಟೈನರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಹೊರವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಸ್ಯಾಂಜೋ ಆಸ್ಪತ್ರೆ ಬಳಿ ಇಂದು ಬೆಳಗ್ಗೆ ನಡೆಯಿತು.

ಕುಣಿಗಲ್‌-ಹೆಬ್ಬರು-ತುಮಕೂರು ನಡುವೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಂಟೈನರ್​ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿರುವುದರಿಂದ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಯಾಂಜೋ ಆಸ್ಪತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಡ್ಯದ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ದೃಶ್ಯ ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Source : https://www.etvbharat.com/kn/!state/accident-between-bus-and-container-near-mandya-karnataka-news-kas24093002524

Leave a Reply

Your email address will not be published. Required fields are marked *