ಬಸ್ ಪಲ್ಟಿಯಾಗಿ ಶಾಲಾ, ಕಾಲೇಜು ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಇಂದು ನಡೆದಿದೆ.

ಬಳ್ಳಾರಿ: ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿ ಪಲ್ಟಿ ಹೊಡೆದು 40ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ರಸ್ತೆಯಲ್ಲಿ ಇಂದು ಸಂಭವಿಸಿದೆ.
ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಗಿರೆನಹಳ್ಳಿ ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್ನಲ್ಲಿ ಶಾಲಾ, ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಕಂಡಕ್ಟರ್ ಕೈ ಮುರಿದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಭೇಟಿ ನೀಡಿ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ: https://chat.whatsapp.com/KnDIfiBURQ9G5sLEJLqshk
ನಮ್ಮ Facebook page: https://www.facebook.com/samagrasudii