ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಅ. 9 ಚಿತ್ರದುರ್ಗದಿಂದ ಚಳ್ಳಕೆರೆ ರೈಲು ಮಾರ್ಗದಲ್ಲಿ ಬರುವ ಚಿತ್ರದುರ್ಗ ನಗರ ವ್ಯಾಪ್ತಿಯ ಗೋನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಿರ್ಮಾಣ ಮಾಡಿರುವ ರೈಲ್ವೆ ಕೆಳಸೇತುವೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು. ನಿನ್ನೆ ರಾತ್ರಿ ಸುರಿದ ಮಳೆಗೆ ಸೇತುವೆ ಕೆಳಗೆ ನೀರು ಜಮಾವಣೆಯಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿರುವುದನ್ನು ಸಂಸದ ಗೋವಿಂದ ಕಾರಜೋಳ ಇಂದು
ವೀಕ್ಷಣೆ ಮಾಡಿ ರೈಲ್ವೆ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡು ಕೂಡಲೇ ಸರಿಪಡಿಸುವಂತೆ ಸೂಚನೆ ನೀಡಿದರು.
ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ಈ ರೀತಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ರೈಲ್ವೆ
ಕೆಳಸೇತುವೆಗಳ ಬಳಿ ನೀರು ಜಮಾವಣೆಯಾಗುತ್ತಿದ್ದು, ಇಂತಹ ಸೇತುವೆಗಳನ್ನು ಪಟ್ಟಿ ಮಾಡಿ ಸಭೆಯಲ್ಲಿ ರೈಲ್ವೆ ಅಧಿಕಾರಿಗಳ ಗಮನ
ಸೆಳೆಯಲಾಗಿತ್ತು. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂತಹ ಸಾಕಷ್ಟು ಸೇತುವೆಗಳ ಬಳಿ ನೀರು ಜಮಾವಣೆಯಾಗುತ್ತಿದ್ದು,
ಕೂಡಲೇ ಇವುಗಳನ್ನು ಸರಿಪಡಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು