ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ.26:
ಚಿತ್ರದುರ್ಗ ಜಿಲ್ಲೆಯ ಎಂಟು ಗ್ರಾಮಗಳಲ್ಲಿ ಅಂಚೆ ಕಚೇರಿಗಳ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಒಟ್ಟು ರೂ.3.40 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ.
ಜಿಲ್ಲೆಯ ಹಲವು ದೊಡ್ಡ ಗ್ರಾಮಗಳಲ್ಲಿ ಅಂಚೆ ಕಚೇರಿಗಳು ಇದುವರೆಗೆ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದುದನ್ನು ಗಮನಿಸಿ, ಸ್ವಂತ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸಂವಹನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಅನುಮೋದಿಸಿದ ಕೇಂದ್ರ ಸಂವಹನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಅನುದಾನ ಬಿಡುಗಡೆ ಮಾಡಿದ್ದಾರೆ.
ಅನುದಾನದ ವಿವರ ಹೀಗಿದೆ:
- ಹಿರಿಯೂರು ತಾಲ್ಲೂಕಿನ ಆದಿವಾಲ – ₹50 ಲಕ್ಷ
- ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ – ₹35 ಲಕ್ಷ
- ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು – ₹45 ಲಕ್ಷ
- ಚಿತ್ರದುರ್ಗ ತಾಲ್ಲೂಕಿನ ಓಬಳಾಪುರ – ₹37 ಲಕ್ಷ
- ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ – ₹44 ಲಕ್ಷ
- ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿ – ₹48 ಲಕ್ಷ
- ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ – ₹45 ಲಕ್ಷ
- ಹೊಸದುರ್ಗ ತಾಲ್ಲೂಕಿನ ಬೆಲಗೂರು – ₹36 ಲಕ್ಷ
ಈ ಮೂಲಕ ಜಿಲ್ಲೆಗೆ ಒಟ್ಟು ರೂ.3.40 ಕೋಟಿ ಅನುದಾನ ಲಭ್ಯವಾಗಿದೆ.
ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಸದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದ್ದಾರೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ಜನರಿಗೆ ಅಂಚೆ ಸೇವೆಗಳು ಇನ್ನಷ್ಟು ಸುಲಭ ಹಾಗೂ ಪರಿಣಾಮಕಾರಿಯಾಗಲಿವೆ.
Views: 45