MS Dhoni: ಐಪಿಎಲ್ ಸಿಕ್ಸರ್ ಕಿಂಗ್​ಗಳ ಪಟ್ಟಿಗೆ ಎಂಎಸ್ ಧೋನಿ ಎಂಟ್ರಿ..!

IPL 2023: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ಈ ದಾಖಲೆ ಬರೆದ ಸಿಎಸ್​ಕೆ ತಂಡದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.ಹೌದು, ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ 20ನೇ ಓವರ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಲೆಗ್ ಸೈಡ್​ನತ್ತ ರಾಕೆಟ್ ಸಿಕ್ಸ್ ಸಿಡಿಸಿದ್ದರು. ಈ ಸಿಕ್ಸ್​ನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರ 200 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆ ಧೋನಿ ಪಾಲಾಗಿದೆ. ಅಲ್ಲದೆ ಐಪಿಎಲ್​ನಲ್ಲಿ ಒಂದೇ ತಂಡದ ಪರ 200 ಹಾಗೂ ಅದಕ್ಕಿಂತ ಹೆಚ್ಚಿನ ಸಿಕ್ಸ್​ ಸಿಡಿಸಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ನಾಲ್ವರು ಆಟಗಾರರು ಮಾತ್ರ ಒಂದೇ ತಂಡದ ಅತ್ಯಧಿಕ ಸಿಕ್ಸ್ ಬಾರಿಸಿದ್ದರು. ಅವರೆಂದರೆ...1- ಕ್ರಿಸ್ ಗೇಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಕ್ರಿಸ್ ಗೇಲ್ ಒಟ್ಟು 239 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಹಾಗೂ ಒಂದೇ ತಂಡದ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಗೇಲ್ ನಿರ್ಮಿಸಿದ್ದಾರೆ.2- ಎಬಿ ಡಿವಿಲಿಯರ್ಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಲಿಯರ್ಸ್ ಕೂಡ ಆರ್​ಸಿಬಿ ಪರ  ಒಟ್ಟು 238 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಒಂದೇ ತಂಡದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.3- ಕೀರನ್ ಪೊಲಾರ್ಡ್: ಮುಂಬೈ ಇಂಡಿಯನ್ಸ್ ಪರ 223 ಸಿಕ್ಸ್​ಗಳನ್ನು ಸಿಡಿಸಿರುವ ಕೀರನ್ ಪೊಲಾರ್ಡ್​ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.4- ವಿರಾಟ್ ಕೊಹ್ಲಿ: ಐಪಿಎಲ್ ಆರಂಭದಿಂದಲೂ ಆರ್​ಸಿಬಿ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 218 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಿಕ್ಸರ್​ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.5- ಮಹೇಂದ್ರ ಸಿಂಗ್ ಧೋನಿ: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಸಿಎಸ್​ಕೆ ಪರ 200 ಸಿಕ್ಸ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

source https://tv9kannada.com/photo-gallery/cricket-photos/ms-dhoni-new-record-batters-with-200-sixes-for-a-single-ipl-team-kannada-news-zp-au50-546774.html

Leave a Reply

Your email address will not be published. Required fields are marked *