ಪೋಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರ್ದೊಷಿ: ಕೋರ್ಟ್ ಮಹತ್ವದ ತೀರ್ಪು.

ಚಿತ್ರದುರ್ಗ ನ. 26

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಚಿತ್ರದುರ್ಗದ ಶ್ರೀ ಶಿವಮೂರ್ತಿ ಮುರುಘಾಶ್ರೀ ಅವರನ್ನು ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಖುಲಾಸೆ ಗೊಳಿಸಿದೆ. ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್ ಚನ್ನಬಸಪ್ಪ ಹಡಪದ ಬುಧವಾರ ತೀರ್ಪು ಪ್ರಕಟಿಸಿದರು.

ಎ1 ಆರೋಪಿಯಾಗಿದ್ದಶಿವಮೂರ್ತಿಮುರುಘಾಶ್ರೀಗಳು,ರಶ್ಮಿ ಹಾಗೂ ಪರಮಶಿವಯ್ಯ ಅವರನ್ನು ದೋಷಮುಕ್ತಿಗೊಳಿಸಲಾಗಿದೆ.

ರಾಜ್ಯದ ಗಮನ ಸೆಳೆದಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳ ಪ್ರಕರಣದ ವಿಚಾರಣೆಯನ್ನು ಕೋರ್ಟ್‍ಮುಕ್ತಾಯಗೊಳಿಸಿ ಇಂದಿಗೆ (ನವಂಬರ್ 26) ಕ್ಕೆ ತೀರ್ಪು ಪ್ರಕಟಿಸುವುದಾಗಿ ನ.18ರಂದು ಹೇಳಿತ್ತು. ಪ್ರಕರಣದ ವಾದ-ಪ್ರತಿವಾದ ಆಲಿಸಿ ಕೋರ್ಟ್ ವಿಚಾರಣೆಯನ್ನು ನ.18ರಂದು ಮುಕ್ತಾಯಗೊಳಿಸಿತ್ತು.

ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪರವಾಗಿ ಕೋರ್ಟ್‍ನಲ್ಲಿ ಕ್ರಿಮಿನಲ್ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಪ್ರಾಸಿಕ್ಯೂಷನಲ್ ಪರ ವಕೀಲರು ಸಹ ವಾದ ಮಂಡಿಸಿದ್ದರು.

ಏನಿದು ಪ್ರಕರಣ

ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲದೆ ಇತರೆ ಮಕ್ಕಳ ಮೇಲೂ ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಠದಲ್ಲಿನ ಅಡುಗೆ ಕೆಲಸದ ಮಹಿಳೆ ದೂರಿನಲ್ಲಿ ವಿವರಿಸಿದ್ದರು. ಇದರ ಆಧಾರದಡಿ ಮೈಸೂರಿನ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಅಕ್ಟೋಬರ್ 13ರಂದು ಎಫ್‍ಐಆರ್ ದಾಖಲಿಸಲಾಗಿತ್ತು. ತದನಂತರ ಈ ದೂರನ್ನು ಚಿತ್ರದುರ್ಗ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಎಫ್‍ಐಆರ್‍ನಲ್ಲಿ ಆರೋಪಿ ಶರಣರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‍ಗಳಾದ 376 (ಸಿ), 376 (2) (ಎನ್), 376 (ಎಬಿ), 376 (3), 366, 366 (ಎ), 323, 114 ಮತ್ತು 34, ಪೋಕ್ಸೊ ಕಾಯಿದೆ ಸೆಕ್ಷನ್ 5 (ಎಲ್), 6,7 ಮತ್ತು 17, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ ಸೆಕ್ಷನ್ 3 (ಎಫ್) ಮತ್ತು 7 ಹಾಗೂ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ಸಂರಕ್ಷಣೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2022 ಆಗಸ್ಟ್ 26 ರಂದು ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಕೇಸ್ ದಾಖಲಾಗಿತ್ತು. ನಂತರ ಎರಡನೇ ಪೋಕ್ಸೋ ಕೇಸ್ ಕೂಡಾ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾ ಶ್ರೀ ಜೈಲು ಸೇರಿದ್ದರು. ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ಮೊದಲ ಕೇಸ್ ವಿಚಾರಣೆ ಮುಕ್ತಾಯವಾಗಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಇಬ್ಬರು ಸಂತ್ರಸ್ತೆಯರು ಇರುವ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

Views: 91

Leave a Reply

Your email address will not be published. Required fields are marked *