
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ನ. 17 : ಮದಕರಿನಾಯಕ ಸಾಂಸ್ಕೃತಿಕ ಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನ. 19 ರ
ಮಂಗಳವಾರದಂದು ಸಂಜೆ 6 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಸಂಗೀತೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು
ಮದಕರಿನಾಯಕ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಗೋಪಾಲಸ್ವಾಮಿ ನಾಯಕ್ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿಗಳಾದ ಬಿ.ಟಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ನಗರಸಭೆಯ ಮಾಜಿ ಅಧ್ಯಕ್ಷರಾದ
ಬಿ.ಕಾಂತರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರಾದ ಎಸ್.ಕೆ. ಮಲ್ಲಿಕಾರ್ಜನ್, ಹಿರಿಯ ಸಂಗೀತ
ಕಲಾವಿದರಾದ ಎಸ್.ವಿ.ಗುರುಮೂರ್ತಿ, ಹಿಂದೂಸ್ತಾನಿ ಶಾಸ್ತ್ರಿಯ ಸಂಗೀತ ಕಲಾವಿದರಾದ ಸುಜಿತ್, ವಯೋಲಿನ್‌ವಾದ ಕಲಾವಿದರಾದ
ಶ್ರೀಮತಿ ಭವ್ಯರಾಣಿರವರು ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಹುಣಸೇಕಟ್ಟೆ ಗ್ರಾಮದ
ಓಬಳೇಶ್ ರವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಶಾಸ್ತ್ರಿಯ ಸಂಗೀತ, ಹಿಂದೂಸ್ತಾನಿ ಸಂಗೀತ, ವಯೋಲಿನ್ ವಾದನ, ಜಾನಪದ ಸಂಗೀತ, ತತ್ವ ಪದಗಳು, ವಚನ
ಸಂಗೀತ, ಸುಗಮ ಸಂಗೀತ, ಭಕ್ತಿ ಸಂಗೀತ, ಕನ್ನಡ ಗೀತ ಗಾಯನ ಹಾಗೂ ರಂಗ ಗೀತೆಗಳ ಗಾಯನ ನಡೆಯಲಿದೆ.