Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • Namibia vs Karnataka: ನಿಕಿನ್-ಚೇತನ್ ಸ್ಪೋಟಕ ಸೆಂಚುರಿ: ನಮೀಬಿಯಾ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ
Sports

Namibia vs Karnataka: ನಿಕಿನ್-ಚೇತನ್ ಸ್ಪೋಟಕ ಸೆಂಚುರಿ: ನಮೀಬಿಯಾ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ

June 7, 2023
samagrasuddi

Namibia vs Karnataka: ವಿಂಡ್​ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನಮೀಬಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕರ್ನಾಟಕ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರವಿಕುಮಾರ್ ಸಮರ್ಥ್ ಫೀಲ್ಡಿಂಗ್ ಆಯ್ದುಕೊಂಡಿದ್ದರು.ಅದರಂತೆ ಮೊದಲು ಬ್ಯಾಟ್ ಮಾಡಿದ ನಮೀಬಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶಾನ್ ಫೌಷೆಯನ್ನು ಹಾಗೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ವ್ಯಾನ್​ ಲಿಂಗನ್​ರನ್ನು 6ನೇ ಓವರ್​ನಲ್ಲಿ ವಿಜಯಕುಮಾರ್ ವೈಶಾಕ್ ಔಟ್ ಮಾಡಿ ಕರ್ನಾಟಕಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು.ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಝೇನ್ ಗ್ರೀನ್ 72 ಎಸೆತಗಳಲ್ಲಿ 3 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 65 ರನ್ ಬಾರಿಸಿದರು. ಇನ್ನು ಗ್ರೀನ್​ಗೆ ಸಾಥ್ ನೀಡಿದ ಬೆರ್ನಾಡ್ 6 ಭರ್ಜರಿ ಸಿಕ್ಸ್​ನೊಂದಿಗೆ 49 ಎಸೆತಗಳಲ್ಲಿ 59 ರನ್ ಸಿಡಿಸಿದರು. ಇದಾಗ್ಯೂ ಕೆಲ ಕ್ರಮಾಂಕದಲ್ಲಿ ಕುಸಿತ ಕಂಡ ನಮೀಬಿಯಾ ತಂಡವು 45.1 ಓವರ್​ಗಳಲ್ಲಿ 226 ರನ್​ಗಳಿಸಿ ಸರ್ವಪತನ ಕಂಡಿತು.ಕರ್ನಾಟಕ ಪರ ಶುಭಾಂಗ್ ಹೆಗ್ಡೆ 10 ಓವರ್​ಗಳಲ್ಲಿ 44 ರನ್ ನೀಡಿ 3 ವಿಕೆಟ್ ಪಡೆದರೆ, ವಿಜಯಕುಮಾರ್ ವೈಶಾಕ್ 2 ವಿಕೆಟ್ ಕಬಳಿಸಿದರು. ಇನ್ನು ನಿಕಿನ್ ಜೋಸ್ ಹಾಗೂ ರಿಷಿ ಬೋಪಣ್ಣ ತಲಾ 1 ವಿಕೆಟ್ ಪಡೆದರು.ಈ ಮೊತ್ತವನ್ನು ಬೆನ್ನತ್ತಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ರವಿಕುಮಾರ್ ಸಮರ್ಥ್ (3) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಜೊತೆಯಾದ ಎಲ್​ಆರ್​ ಚೇತನ್ ಹಾಗೂ ನಿಕಿನ್ ಜೋಸ್ ಅತ್ಯುತ್ತಮ ಇನಿಂಗ್ಸ್ ಆಡಿದರು.ಆರಂಭದಲ್ಲಿ ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಈ ಜೋಡಿ ನಿಧಾನವಾಗಿ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಅದರಲ್ಲೂ ಎಲ್​ಆರ್ ಚೇತನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ನಮೀಬಿಯಾ ಬೌಲರ್​ಗಳ ಬೆಂಡೆತ್ತಿದರು.ಪರಿಣಾಮ 25 ಓವರ್​ ವೇಳೆಗೆ ಕರ್ನಾಟಕ ತಂಡದ ಮೊತ್ತ 150 ರ ಗಡಿ ತಲುಪಿತು. ಇತ್ತ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಚೇತನ್ 15 ಫೋರ್ ಹಾಗೂ 1 ಭರ್ಜರಿ ಸಿಕ್ಸ್​ನೊಂದಿಗೆ ಕೇವಲ 92 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದರು.ಮತ್ತೊಂದೆಡೆ ನಿಕಿನ್ ಜೋಸ್ 90 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಶತಕ ಪೂರೈಸಿದರು. ಅಲ್ಲದೆ 225 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಚೇತನ್ ಅಜೇಯ 120 ರನ್ ಬಾರಿಸಿದರೆ, ನಿಕಿಕ್ ಅಜೇಯ 101 ರನ್​ಗಳಿಸಿದರು. ಅದರಂತೆ ಕರ್ನಾಟಕ ತಂಡವು 33.4 ಓವರ್​ಗಳಲ್ಲಿ 227 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.
ವಿಶೇಷ ಎಂದರೆ ಇದಕ್ಕೂ ಮುನ್ನ ನಮೀಬಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ನಿಕಿನ್ ಜೋಸ್ (103) ಹಾಗೂ ಎಲ್​ಆರ್​ ಚೇತನ್ (169) ಶತಕ ಬಾರಿಸಿದ್ದರು. ಇದೀಗ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಯುವ ದಾಂಡಿಗರಿಬ್ಬರು ಮಿಂಚಿದ್ದಾರೆ.

source https://tv9kannada.com/photo-gallery/cricket-photos/namibia-vs-karnataka-3rd-odi-karnataka-won-the-match-kannada-news-zp-596279.html

Tags: Cricket, samagrasuddi, ಸಮಗ್ರ ಸುದ್ದಿ

Post navigation

ಜೂನ್ 15ರವರೆಗೆ ಪ್ರತಿಭಟನೆ ಮಾಡುವುದಿಲ್ಲ: ಅನುರಾಗ್ ಠಾಕೂರ್ ಭೇಟಿ ಬಳಿಕ ಹೇಳಿಕೆ ನೀಡಿದ ಸಾಕ್ಷಿ ಮಲಿಕ್
WTC Final 2023: ಡಬ್ಲ್ಯುಟಿಸಿ ಫೈನಲ್​ನಲ್ಲಿ ಕೊಹ್ಲಿ ಬ್ಯಾಟ್​ನಿಂದ ಸೃಷ್ಟಿಯಾಗುವ 5 ದಾಖಲೆಗಳಿವು

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81
  • 1ನೇ ತರಗತಿ ದಾಖಲಾತಿ: 6 ವರ್ಷದ ಕಡ್ಡಾಯ ನಿಯಮ ಸಡಿಲಿಸಿದ ರಾಜ್ಯ ಸರ್ಕಾರ, ಪೋಷಕರಿಗೆ ಭರ್ಜರಿ ರಿಲೀಫ್!
  • ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ.”
  • SSLC 2026 : ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ; ಹೊಸ ದಿನಾಂಕದ ವಿವರ.
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
Copyright © 2026
CONTACT US
Theme by: Theme Horse
Proudly Powered by: WordPress