ನಂದಿನಿ ಹಾಲಿನ ದರ ಶೀಘ್ರ ಹೆಚ್ಚಳ, ಎಷ್ಟು?

ಕರ್ನಾಟಕದಲ್ಲಿ ಮತ್ತೆ ನಂದಿನಿ ಹಾಲಿನ ಬೆಲೆ ಹೆಚ್ಚಳವಾಗುವ ಸುದ್ದಿ ಬಂದಿದೆ. ಕಳೆದ ಕೆಲವು ತಿಂಗಳಿನಿಂದ ನಂದಿನಿ ಹಾಲು ಹಾಗೂ ಮೊಸರಿನ ಬೆಲೆ ಹೆಚ್ಚಳವಾಗಬಹುದು ಎನ್ನುವ ಬಗ್ಗೆ ಸುದ್ದಿ ಬರುತ್ತಲ್ಲೇ ಇದೆ. ಇದೀಗ ಕೊನೆಗೂ ನಂದಿನಿ ಹಾಲಿನ ಬೆಲೆ 5 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಮುಹೂರ್ತ ಫಿಕ್ಸ್‌ ಮಾಡಲಾಗಿದೆ.

ಇಷ್ಟರಲ್ಲೇ ನಂದಿನಿ ಹಾಲಿನ ಬೆಲೆ ಹೆಚ್ಚಳ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಲಾಗಿದೆ.
ಈ ಬಗ್ಗೆ ಮಾತನಾಡಿರುವ ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್‌ ಅವರು, ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಪ್ರಸ್ತಾವನೆ ಬಂದಿರುವುದು ನಿಜ ಎಂದು ಹೇಳಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದಲೂ ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆದಿದೆ. ಆದರೆ, ಹಾಲಿನ ದರ ಹೆಚ್ಚಳವಾಗಿಲ್ಲ. ಇದೀಗ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರ ಹಾಲಿನ ದರ ಹೆಚ್ಚಳವಾಗಲಿದೆ ಎನ್ನಲಾಗುತ್ತಿದೆ. ಇನ್ನು ಈಚೆಗೆ ನಡೆದ ಹಾಲು ಒಕ್ಕೂಟ ಸಭೆಯಲ್ಲಿ 5 ರೂಪಾಯಿ ದರ ಏರಿಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆಯನ್ನು ಪರಿಶೀಲನೆ ಮಾಡಿ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದಿ ಹೇಳಲಾಗಿದೆ. ಅಲ್ಲದೆ ನಂದಿನಿ ಹಾಲಿನ ಪ್ಯಾಕೆಟ್‌ಗಳಲ್ಲಿ ನೀಡಲಾಗುತ್ತಿದ್ದ 50 ಎಂಎಲ್ ಹೆಚ್ಚುವರಿ ಹಾಲಿಗೆ 2 ರೂಪಾಯಿ ಹೆಚ್ಚಿಸಲಾಗಿತ್ತು. ಇದನ್ನು ತೆಗೆದು ಯಥಾಸ್ಥಿತಿ ಕಾಪಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ. ಇದನ್ನು ವಾಪಸ್‌ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ.

ಸಂಕ್ರಾಂತಿಯ ನಂತರ ಹೆಚ್ಚಳ ?

ಇನ್ನು ಹಾಲಿನ ದರವನ್ನು ಸಂಕ್ರಾಂತಿಯ ನಂತರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ಭೀಮಾನಾಯ್ಕ್‌ ಅವರು, ಸಂಕ್ರಾಂತಿ ಹಬ್ಬದ ನಂತರ ಹಾಲಿನ ದರ ಹೆಚ್ಚಳದ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಹೀಗಾಗಿ, ಹಾಲಿನ ದರ ಸಂಕ್ರಾಂತಿಯ ನಂತರ ಹೆಚ್ಚಳವಾಗುವುದು ಬಹುತೇಕ ಖಚಿತ. ಆದರೆ, ಎಷ್ಟು ರೂಪಾಯಿ ಎನ್ನುವುದಷ್ಟೇ ಈಗ ಗೊತ್ತಾಗಬೇಕಾಗಿದೆ ಎಂದು ಹೇಳಲಾಗಿದೆ. ಅಲ್ಲದೆ

50 ಎಂಎಲ್ ಹಾಲು ಕಡಿತ ಮಾಡುವುದಕ್ಕೂ ನಿರ್ಧರಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ ಏಕಾಏಕಿ ಹಾಲಿನ ಉತ್ಪಾದನೆ ಹೆಚ್ಚಳವಾಗಿತ್ತು ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಹಾಲಿನ ಪ್ಯಾಕೆಟ್‌ನಲ್ಲಿ ಹಾಲಿನ ಪ್ರಮಾಣವನ್ನು ಕೆಎಂಎಫ್ 50 ಎಂಎಲ್ ಹೆಚ್ಚಳ ಮಾಡಿತ್ತು. ಅಲ್ಲದೆ ಈ ರೀರಿ ಹೆಚ್ಚುವರಿ ಹಾಲಿಗೆ 2 ರೂಪಾಯಿ ನಿಗದಿ ಮಾಡಲಾಗಿತ್ತು. ಇದೀಗ ಹಾಲಿನ ಉತ್ಪಾದನೆ ಮೊದಲಿನಂತೆ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ ಹೆಚ್ಚುವರಿ 50 ಎಂಎಲ್ ಹಾಲನ್ನು ನಿಲ್ಲಿಸಿ ಮೊದಲಿನಂತೆ ಹಾಲು ಮಾರಾಟ ಮಾಡಲು ಕೆಎಂಎಫ್‌ ಮುಂದಾಗಿದೆ.

ಹಾಲಿನ ದರ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವ ಅಥವಾ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಕೆಎಂಎಫ್‌ಗೆ ಈ ಸಂಬಂಧ ಪ್ರಸ್ತಾವನೆ ಬಂದಿದೆ ಎಂದು ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್‌ ಅವರು ಹೇಳಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.





Leave a Reply

Your email address will not be published. Required fields are marked *