ಚಿತ್ರದುರ್ಗ ಸೆ. 19
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಮೋದಿ ಅವರು ಯಾವುದೇ ಕಳಂಕವಿಲ್ಲದೆ, ಒಂದು ದಿನವೂ ರಜೆ ತೆಗೆದುಕೊಳ್ಳದೆ, ಕುಟುಂಬವನ್ನು ದೂರವಿಟ್ಟು ನಿರಂತರವಾಗಿ ದೇಶದ ರಕ್ಷಣೆ ಮತ್ತು ಜನರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಸ್. ಕೆ. ಬಸವರಾಜನ್ ಬಣ್ಣಿಸಿದರು.
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 77ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸುದೀರ್ಘ 25 ವರ್ಷಗಳ ಸಾರ್ವಜನಿಕ ಸೇವಾ ಅವಧಿಯ (ಮುಖ್ಯಮಂತ್ರಿಯಾಗಿ ಮತ್ತು ಪ್ರಧಾನಮಂತ್ರಿಯಾಗಿ) ನೆನಪಿಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಕ್ಷದ ವರಿಷ್ಠರ ಆಶಯ ದಂತೆ ಯಾವುದೇ ಆಡಂಬರವಿಲ್ಲದೆ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಅರ್ಥಪೂರ್ಣ ಕಾರ್ಯ ಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ರಕ್ತದಾನ ಶಿಬಿರದ ಮೂಲಕ ಸಂಗ್ರಹವಾಗುವ ರಕ್ತವು ಸಂಕಷ್ಟದ ಲ್ಲಿರುವ ಬಡ ರೋಗಿಗಳು ಹಾಗೂ ತುರ್ತು ಚಿಕಿತ್ಸೆ ಅಗತ್ಯವಿರುವ ಜೀವಗಳನ್ನು ಉಳಿಸಲು ನೆರವಾಗಲಿದೆ ಬಿಜೆಪಿ ಪಕ್ಷವು ಚುನಾವಣೆ ಇರಲಿ ಇಲ್ಲದಿರಲಿ ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿರುತ್ತದೆ ವರಿಷ್ಠರು ನೀಡಿದ 18 ವಿವಿಧ ಕಾರ್ಯಕ್ರಮಗಳನ್ನು ಪೂರೈಸಲಾಗುವುದು ಸಮಾಜದ ಬಡ ರೋಗಿಗಳಿಗೆ ರಕ್ತದಾನದಂತಹ ಜೀವ ರಕ್ಷಕ ಸೇವೆ ತಲುಪಿಸುವುದು ಮತ್ತು ದೇಶಸೇವೆಯಲ್ಲಿ ತೊಡಗಿರುವ ಪ್ರಧಾನಿಯವರಿಗೆ ದೀರ್ಘಾಯುಷ್ಯ ಕೋರುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಎಂದು ಹೇಳಿದರು.
ನಿಕಟಪೂರ್ವ ಜಿಲ್ಲಾಧ್ಯಕ್ಷ ಸಹ ಪ್ರಭಾರಿ ಮುರಳಿ ಮಾತನಾಡಿ, ಬಿಜೆಪಿ ಕೇವಲ ಅಧಿಕಾರ ಅಥವಾ ರಾಜಕಾರಣಕ್ಕಾಗಿ ಸೀಮಿತವಾಗಿರದೆ, ಸೇವಾ ಮನೋಭಾವದಿಂದ ಸಂಘಟನೆಯನ್ನು ನಡೆಸುತ್ತಿದೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ಒಂದು ತಿಂಗಳ ಕಾಲ ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಡಿಯಲ್ಲಿ ಒಟ್ಟು 13 ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ದಾನಗಳಲ್ಲೇ ಶ್ರೇಷ್ಠ ದಾನವಾಗಿರುವ ರಕ್ತದಾನ ಶಿಬಿರವನ್ನು ಯುವ ಮೋರ್ಚಾದ ನೇತೃತ್ವದಲ್ಲಿ ಆಯೋಜಿಸಲಾಗಿದೆ, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕು 50 ವರ್ಷ ವಯಸ್ಸು ದಾಟಿದ ನಂತರ ರಕ್ತವು ಅಷ್ಟಾಗಿ ಪ್ರಯೋಜನಕ್ಕೆ ಬರುವುದಿಲ್ಲವಾದ್ದರಿಂದ, ಯುವಜನತೆ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿ ಬಿಜೆಪಿ ಪಕ್ಷವು ರಾಜಕಾರಣಕ್ಕಷ್ಟೇ ಸೀಮಿತವಾಗಿರದೆ ಸೇವಾ ಕಾರ್ಯಗಳಿಗೆ ಆದ್ಯತೆ ನೀಡುತ್ತದೆ. ಸೇವಾ ಸಂಕಲ್ಪ ಅಭಿಯಾನದ ಮೂಲಕ ರಕ್ತದಾನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕ ಸೇವೆ ಹಾಗೂ ಜೀವ ರಕ್ಷಣೆಗೆ ಒತ್ತು ನೀಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಮುರಳಿ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಟಿ. ಕುಮಾರಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಿಯಾಗಿ ಸತತ 25 ವರ್ಷಗಳ ಕಾಲ ಕಳಂಕರಹಿತ ಮತ್ತು ಜನಪರ ಆಡಳಿತ ನೀಡುವ ಮೂಲಕ ನಿರಂತರವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಯುವಮೋರ್ಚಾ ಜಿಲ್ಲಾಧ್ಯಕ್ಷ ಅರುಣ್ ಅವರ ಅಧ್ಯಕ್ಷತೆಯಲ್ಲಿ ಈ ರಕ್ತದಾನ ಶಿಬಿರವನ್ನು ಆಯೋಜಿ¸ ಲಾಗಿದ್ದು, ಜಿಲ್ಲೆಯ ಎಲ್ಲ ಮಂಡಲಗಳ ಪದಾಧಿಕಾರಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ರಕ್ತದಾನ ಮಾಡುತ್ತಿದ್ದಾರೆ ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಲು ಪ್ರಧಾನಿ ಮೋದಿಯವರಿಗೆ ಭಗವಂತ ಇನ್ನಷ್ಟು ಶಕ್ತಿ ನೀಡಲಿ ಅವರಿಗೆ ಪಕ್ಷದ ಕಾರ್ಯಕರ್ತರು ಸಂಪೂರ್ಣವಾಗಿ ಅವರ ಬೆಂಬಲಕ್ಕೆ ನಿಲ್ಲಲಿದ್ದಾರೆ ಮಹಿಳೆಯರು ಮತ್ತು ಯುವಕರನ್ನೊಳಗೊಂಡಂತೆ ಪಕ್ಷದ ಎಲ್ಲಾ ಪದಾಧಿಕಾರಿಗಳು ಈ ತಿಂಗಳ ಪೂರ್ತಿ ನಡೆಯಲಿರುವ ಸೇವಾ ಸಂಕಲ್ಪ ಅಭಿಯಾನದ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಯಿತು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅರುಣ್ ಮಾತನಾಡಿ, ವಿಕಸಿತ ಭಾರತದೆಡೆಗೆ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಚಿತ್ರದುರ್ಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಸೇವಾ ಸಂಕಲ್ಪ ಅಭಿಯಾನದ ಮೂರನೇ ದಿನದ ಕಾರ್ಯಕ್ರಮವಾಗಿ ದೇಶಾದ್ಯಂತ ಏಕರೂಪದಲ್ಲಿ ಈ ರಕ್ತದಾನ ಶಿಬಿರಗಳನ್ನು ನಡೆಸಲಾ ಗುತ್ತಿದೆ ಪ್ರಧಾನಮಂತ್ರಿಯವರ 76ನೇ ಜನ್ಮದಿನದ ಅಂಗವಾಗಿ ಇಂದು ಚಿತ್ರದುರ್ಗ ನಗರದಲ್ಲಿ 76 ಯೂನಿಟ್ ರಕ್ತದಾನ ಮಾಡುವ ಗುರಿ ಹೊಂದಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಬಲವಾದ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಸಾಧನೆಗೈದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಮೋಹನ್ ಕುಮಾರ್, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್, ಉಪಾಧ್ಯಕ್ಷೆ ಶೈಲಜಾ ರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪರಶುರಾಮ್, ನಗರ ಯುವ ಮೋರ್ಚಾದ ಅಧ್ಯಕ್ಷ ವಸಂತ್ ಆಚಾರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಲೀಲಾವತಿ ಮತ್ತು ಬಸವೇಶ್, ಪ್ರಶಾಂತ್, ನಾಗರಾಜ್, ವರುಣ್ ಕುಮಾರ್, ಚೇತನ್, ಕುಮಾರ್ ಜಯ್ಯಪ್ಪ, ಸುಮಾ ಅರುಣ್ ಕುಮಾರಿ, ಕಿರಣ್ ಸೇರಿದಂತೆ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j