ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ವತಿಯಿಂದ ರಾಷ್ಟ್ರಗೀತೆ ಕೈಬರಹ ಅಭಿಯಾನ

ಚಿತ್ರದುರ್ಗ: ಎಂಬತ್ತನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಋಷಿಸಂಸ್ಕೃತಿ ಗುರುಕುಲ ಮಹಾಸಂಸ್ಥಾನ ಹಾಗೂ ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗ ಜಿಲ್ಲಾದ್ಯಂತ “ರಾಷ್ಟ್ರಗೀತೆ ಕೈಬರಹ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್ ತಿಳಿಸಿದ್ದಾರೆ.

ಈ ಅಭಿಯಾನದ ಪ್ರಮುಖ ಉದ್ದೇಶ ರಾಷ್ಟ್ರಗೀತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು, ರಾಷ್ಟ್ರಪ್ರೇಮ ಮತ್ತು ದೇಶಭಕ್ತಿಯ ಮನೋಭಾವವನ್ನು ಬೆಳೆಸುವುದು, ರಾಷ್ಟ್ರಗೀತೆಯ ಮಹತ್ವವನ್ನು ತಿಳಿಸುವುದರ ಜೊತೆಗೆ ಸುಂದರ ಕೈಬರಹ, ಸರಿಯಾದ ಕಾಗುಣಿತ ಹಾಗೂ ಬರವಣಿಗೆಯ ಕೌಶಲ್ಯವನ್ನು ಅಭಿವೃದ್ಧಿಪಡಿಸುವುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಮತ್ತು ಹಾಸ್ಟೆಲ್ ಗಳಲ್ಲಿ ಈ ಅಭಿಯಾನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ರಾಷ್ಟ್ರಗೀತೆಯನ್ನು ತಮ್ಮ ಸ್ವಂತ ಕೈಬರಹದಲ್ಲಿ ಬರೆದು ಸಲ್ಲಿಸಬೇಕಾಗಿದ್ದು, ಅತ್ಯುತ್ತಮ ಕೈಬರಹ ಹಾಗೂ ಕಾಗುಣಿತ ಹೊಂದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಬಹುಮಾನ ನೀಡಲಾಗುವುದು.

ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳೊಂದಿಗೆ “ಗುರುಕುಲ ಪುರಸ್ಕಾರ” ನೀಡಿ ಗೌರವಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಧ್ಯಕ್ಷರಾದ ಮಾಲತೇಶ್ ಅರಸ್, ಪ್ರಧಾನ ಕಾರ್ಯದರ್ಶಿ ಗೀತಾ ಭರಮಸಾಗರ, ಮತ್ತು ನಿರ್ದೇಶಕ ದೇವರತ್ನ ಮಂಜು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9480472030.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *