ಚಿತ್ರದುರ್ಗ:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ರಾಷ್ಟ್ರನಾಯಕ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಎಸ್. ನಿಜಲಿಂಗಪ್ಪ ಅವರ 27ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಗಸ್ಟ್ 8ರ ಶನಿವಾರದಂದು ಚಿತ್ರದುರ್ಗದ ಸೀಬಾರದಲ್ಲಿರುವ ಎಸ್.ಎನ್. ಸ್ಮಾರಕದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ) ಸೀಬಾರ ಹಾಗೂ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶನಿವಾರ ಬೆಳಿಗ್ಗೆ 9:00 ಗಂಟೆಗೆ ಸ್ಮಾರಕದ ಬಳಿ ಪುಷ್ಪನಮನ ಸಲ್ಲಿಸಲಾಗುವುದು ಎಂದು ಟ್ರಸ್ಟ್ನ ಕಾರ್ಯದರ್ಶಿ ಹಾಗೂ ಧರ್ಮದರ್ಶಿಗಳಾದ ಎಸ್.ಎನ್. ಕಿರಣ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಪ್ರಮುಖಾಂಶಗಳು:
- ಉಪಸ್ಥಿತಿ: ಶ್ರೀ ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ಈ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಲಿದ್ದಾರೆ.
- ವಿಶೇಷ ನುಡಿನಮನ: ಇದೇ ಸಂದರ್ಭದಲ್ಲಿ ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ನ ಮಾಜಿ ಅಧ್ಯಕ್ಷರುಗಳಾಗಿ ಸೇವೆ ಸಲ್ಲಿಸಿದ್ದ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಹೆಚ್. ಹನುಮಂತಪ್ಪ ಅವರಿಗೆ ವಿಶೇಷ ‘ನುಡಿ ನಮನ’ ಸಲ್ಲಿಸುವ ಕಾರ್ಯಕ್ರಮವೂ ಜರುಗಲಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷದಲ್ಲಿ ತಾಳ್ಮೆ ಇದ್ದವರಿಗೆ ಅಧಿಕಾರ: ನೂತನ ಸಚಿವ ಟಿ.ರಘುಮೂರ್ತಿ
ಸಾರ್ವಜನಿಕರು ಹಾಗೂ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರನಾಯಕನಿಗೆ ಗೌರವ ನಮನ ಸಲ್ಲಿಸುವಂತೆ ಕೋರಲಾಗಿದೆ.