ದೇಶಾದ್ಯಂತ ಇಂದು ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ನೀಟ್ ಪರೀಕ್ಷೆ ನಡೆಯಲಿದೆ. ಅದೇಷ್ಟೊ ಪೋಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕು ಮಕ್ಕಳನ್ನ ಡಾಕ್ಟರ್ ಮಾಡಬೇಕು ಸಮಾಜದಲ್ಲಿ ಮಕ್ಕಳಿಗೆ ಉಜ್ವಲ ಭವಿಷ್ಯ ರೂಪಿಸಬೇಲು ಅಂತಾ ಕನಸ್ಸು ಕಂಡಿರ್ತಾರೆ. ಅದಕ್ಕೆ ಅಂತಾನೇ ಸಾಕಷ್ಟು ವಿದ್ಯಾರ್ಥಿಗಳು ಸಂಪೂರ್ಣ ತಯಾರಿ ನಡೆಸಿ ಇಂದಿನ ಪರೀಕ್ಷೆಗೆ ಸಿದ್ಧರಾಗಿದ್ದಾರೆ.

ಬೆಂಗಳೂರು, ಮೇ 04: 2025-26ನೇ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ಇಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ವತಿಯಿಂದ ನೀಟ್ (NEET) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ದೇಶದಲ್ಲಿ ಏಕಕಾಲಕ್ಕೆ ನಡೆಯುವ ಈ ಪರೀಕ್ಷೆಗೆ ರಾಜ್ಯದಲ್ಲಿ (Karnataka) 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲ್ಲಿದೆ. ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.
ಇಂದು ನಡೆಯುವ ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ.
ನೀಟ್ ಪರೀಕ್ಷೆಯ ಮಾರ್ಗಸೂಚಿಗಳು ಏನು?
ಇನ್ನು ನೀಟ್ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ಕೆಲವೊಂದು ವಸ್ತ್ರಸಂಹಿತೆಯನ್ನ ನೀಡಿದೆ. ನಕಲು ತಡೆಯುವ ಉದ್ದೇಶದಿಂದ ಪರೀಕ್ಷಾರ್ಥಿಗಳಿಗೆ ಕೆಲವೊಂದು ವಸ್ತ್ರಸಂಹಿತೆಯನ್ನ ಕಡ್ಡಾಯ ಮಾಡಿದೆ. ಆ ಪ್ರಕಾರ ನೀಟ್ ಪರೀಕ್ಷೆಗೆ ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್, ನತ್ತು, ಹೈ ಹಿಲ್ ಚಪ್ಪಲಿ ನಿಷೇಧವಿದೆ. ಹಾಗೂ ಯಾವುದೇ ಲೋಹದ ಉಪಕರಣ ಧರಿಸಲು ಅವಕಾಶವಿಲ್ಲ. ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ ದೊಡ್ಡ ಬಟನ್ ಗಳಿರುವ ಶರ್ಟ್, ಪ್ಯಾಂಟ್, ಶೂ, ಸಾಕ್ಸ್ ಧರಿಸುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಅಥವಾ ಧರಿಸಲು ಕೂಡ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.
ಒಟ್ಟಿನಲ್ಲಿ ನೀಟ್ ಪರೀಕ್ಷೆ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾಗಿದ್ದು, ನೀಟ್ ಪರೀಕ್ಷೆಯನ್ನು ಕನ್ನಡ, ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ, ಒರಿಯಾ, ತಮಿಳು, ತೆಲುಗು, ಉರ್ದು ಮತ್ತು ಪಂಜಾಬಿ ಸೇರಿದಂತೆ ಬಹುಭಾಷೆಗಳಲ್ಲಿ ದೇಶದ್ಯಾಂತ ನಡೆಸಲಾಗುತ್ತಿದೆ. ಇಂದಿನ ಪರೀಕ್ಷೆಗೆ ಸಾಕಷ್ಟು ಮುನ್ನೆಚ್ಚರಿಕೆ ಕೂಡ ವಹಿಸಲಾಗಿದೆ.
TV9 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1