Cricket: ನೇಪಾಳದ ದಿಪೇಂದ್ರ ಸಿಂಗ್ ಐರಿ ಇಲ್ಲಿ ನಡೆಯುತ್ತಿರುವ ಎಸಿಸಿ ಪುರುಷರ ಪ್ರೀಮಿಯರ್ ಕಪ್ T20 ಅಂತಾರಾಷ್ಟ್ರೀಯ ಪಂದ್ಯದ ವೇಳೆ ಶನಿವಾರ ಆತಿಥೇಯ ಕತಾರ್ ವಿರುದ್ಧ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿದರು. ಈ ಮೂಲಕ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು.
ಅಲ್ ಅಮರತ್: ನೇಪಾಳದ ದಿಪೇಂದ್ರ ಸಿಂಗ್ ಐರಿ ಇಲ್ಲಿ ನಡೆಯುತ್ತಿರುವ ಎಸಿಸಿ ಪುರುಷರ ಪ್ರೀಮಿಯರ್ ಕಪ್ T20 ಅಂತಾರಾಷ್ಟ್ರೀಯ ಪಂದ್ಯದ ವೇಳೆ ಶನಿವಾರ ಆತಿಥೇಯ ಕತಾರ್ ವಿರುದ್ಧ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿದರು. ಈ ಮೂಲಕ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು.
ಭಾರತದ ಯುವರಾಜ್ ಸಿಂಗ್ ಅವರು 2007ರ ಟಿ-20 ವಿಶ್ವಕಪ್ ಸಮಯದಲ್ಲಿ ಸ್ಟುವರ್ಟ್ ಬ್ರಾಡ್ ವಿರುದ್ಧ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿದ್ದರು. ನಂತರ ಕೀರಾನ್ ಪೊಲಾರ್ಡ್ 2021 ರಲ್ಲಿ ಶ್ರೀಲಂಕಾದ ಅಕಿಲಾ ದನಂಜಯ ವಿರುದ್ಧ ಈ ಸಾಧನೆ ಮಾಡಿದ್ದರು. ಇದೀಗ ನೇಪಾಳದ ದಿಪೇಂದ್ರ ಸಿಂಗ್ ಐರಿ ಅವರು ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿ ಆ ಗುಂಪನ್ನು ಸೇರಿದ್ದಾರೆ.
24 ವರ್ಷದ ಐರಿ 21 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಏಳು ಸಿಕ್ಸರ್ ಸೇರಿದಂತೆ 64 ರನ್ ಗಳಿಸಿ 304.76 ಸ್ಟ್ರೈಕ್ ರೇಟ್‌ನಲ್ಲಿ ಅಜೇಯರಾಗಿ ಉಳಿದರು. ಆಸಿಫ್ ಶೇಖ್ 52 ರನ್ ಕಲೆಹಾಕುವುದರೊಂದಿಗೆ ನೇಪಾಳ 7 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿತು. ಶುಕ್ರವಾರ ನಡೆದ ಆರಂಭಿಕ ಪಂದ್ಯದಲ್ಲಿ ಮಲೇಷ್ಯಾವನ್ನು ಐದು ವಿಕೆಟ್‌ಗಳಿಂದ ನೇಪಾಳ ಸೋಲಿಸಿತ್ತು.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಅಪರೂಪದ ಸಾಧನೆ ಮಾಡಿದ ಐದನೇ ಬ್ಯಾಟ್ಸ್‌ಮನ್ ಐರಿ ಆಗಿದ್ದಾರೆ. ಇದಕ್ಕೂ ಮುನ್ನಾ ದಕ್ಷಿಣ ಆಫ್ರಿಕಾದ ಹರ್ಷಲ್ ಗಿಬ್ಸ್ ಮತ್ತು ಯುಎಸ್‌ಎಯ ಜಸ್ಕರನ್ ಮಲ್ಹೋತ್ರಾ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಆದಾಗ್ಯೂ, ಐರಿ ಆರು ಸಿಕ್ಸರ್ ಬಾರಿಸಿರುವುದು ಹೊಸದೇನಲ್ಲ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1