ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಕರ್ನಾಟಕ ವಿದ್ಯುತ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮ್ಯಾ ಎಸ್ ಅವರನ್ನು ಸರ್ಕಾರ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಈ ಕುರಿತು ಬುಧವಾರ ಆದೇಶ ಹೊರಡಿಸಲಾಗಿದೆ.
ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ರಮ್ಯಾ ಎಸ್ ಅವರು 2013ರ ಬ್ಯಾಚ್ನ ಅಧಿಕಾರಿಯಾಗಿದ್ದಾರೆ. ಆದರೆ, ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಯಾವುದೇ ಸ್ಥಾನವನ್ನು ತೋರಿಸಲಾಗಿಲ್ಲ.

Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: