ನೂತನ ಸಂಸದೆ ಕಂಗನಾ ರಣಾವತ್ ಗೆ ವಿಮಾನ ನಿಲ್ದಾಣದಲ್ಲಿ ,ಕಪಾಳಮೋಕ್ಷ.

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದ ನಟಿ ಕಂಗನಾ ರಣಾವತ್ (Kangana Ranaut )​​ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಭದ್ರತಾ ತಪಾಸಣೆಯ ಸಮಯದಲ್ಲಿ ನಟ-ರಾಜಕಾರಣಿ ತನ್ನ ಫೋನ್ ಅನ್ನು ಟ್ರೇಯಲ್ಲಿ ಇಡಲು ನಿರಾಕರಿಸಿದ್ದರು. ಅಲ್ಲದೆ ಆ ಬಳಿಕ ಭದ್ರತಾ ಸಿಬ್ಬಂದಿಯನ್ನು ತಳ್ಳಿದ್ದರು. ಇದರಿಂದ ಕೋಪಗೊಂಡ ಅವರು ಮುಖದ ಮೇಲೆ ಹೊಡೆದಿದ್ದಾರೆ ಎನ್ನಲಾಗಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ ನಟಿ ಈ ಹಿಂದೆ ರೈತ ಸಂಘಟನೆಗಳು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವಾಗ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈ ಕೋಪ ರೈತ ಕುಟುಂಬಕ್ಕೆ ಸೇರಿದ್ದ ಭದ್ರತಾ ಸಿಬ್ಬಂದಿಗೆ ಇತ್ತು. ಏರ್​ಪೋರ್ಟ್​ನಲ್ಲಿ ಅವರು ಎದುರಾದಾಗ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದಿಲ್ಲಿಯಲ್ಲಿ ಧರಣಿ ಕುಳಿತ ರೈತರ ವಿರುದ್ಧ ಕಂಗನಾ ಹೇಳಿಕೆ ನೀಡಿದ್ದಳು, ಆ ರೈತರ ಗುಂಪಿನಲ್ಲಿ ನನ್ನ ಅಮ್ಮ ಕೂಡ ಇದ್ದರು ಎಂದು ಆ ಮಹಿಳಾ ಭದ್ರತಾ ಸಿಬ್ಬಂದಿ ಹೇಳಿಕೆ ನೀಡಿದ್ದಾಳೆ.

ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು.

ಕಂಗನಾ ಅವರು ಗುರುವಾರ ಮಧ್ಯಾಹ್ನ 3.30ಕ್ಕೆ ಏರ್​ಪೋರ್ಟ್​ಗೆ ಬಂದಿದ್ದರು. ಕಂಗನಾ ರಣಾವತ್​ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗಾಗಿ ಬರುತ್ತಿದ್ದಾಗ ಕುಲ್ವಿಂದರ್ ಕೌರ್​ ಕೈ ಎತ್ತಿದರು. ಕಂಗನಾ ಕೂಡ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಅವರನ್ನು ಪ್ರಸ್ತುತ, ವಿಮಾನ ನಿಲ್ದಾಣದಲ್ಲಿರುವ ಕಮಾಂಡೆಂಟ್ ಕೋಣೆಯಲ್ಲಿ ಕುಳಿತಿರಿಸಲಾಗಿದೆ. ಕಂಗನಾ ದೆಹಲಿಗೆ ತೆರಳಿದ್ದಾರೆ.

ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

Source : https://vistaranews.com/vistara/kangana-ranaut-alleges-cisf-official-slapped-her-at-chandigarh-airport/668877.html

Leave a Reply

Your email address will not be published. Required fields are marked *