ಚಿತ್ರದುರ್ಗ ಜಿಲ್ಲಾ ಬಿಜೆಪಿ ಎಸ್‌ಸಿ ಮತ್ತು ಎಸ್‌ಟಿ ಮೋರ್ಚಾಕ್ಕೆ ನೂತನ ಅಧ್ಯಕ್ಷರ ನೇಮಕ.

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ಚಿತ್ರದುರ್ಗ ಫೆ. 25 ಭಾರತೀಯ ಜನತಾ ಪಕ್ಷದ ಚಿತ್ರದುರ್ಗ ಜಿಲ್ಲಾ ಘಟಕದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮೋರ್ಚಾ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಪರಶುರಾಮ ಹಾಗೂ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಜೆ.ಬಿ.ರಾಜು ಅವರನ್ನು ನಿಯುಕ್ತಿ ಮಾಡಲಾಗಿದೆ ಮುಂದಿನ ದಿನಮಾನದಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ, ಮುಂಬರುವ ವಿವಿಧ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪರಿಶ್ರಮವನ್ನು ಹಾಕುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *