Nicholas Pooran: ಶಾಕಿಂಗ್: ಬರೋಬ್ಬರಿ 16 ಕೋಟಿಗೆ ಸೇಲ್ ಆದ ನಿಕೋಲಸ್ ಪೂರನ್: ಯಾವ ತಂಡಕ್ಕೆ?

nicholas pooran

ಇಂಡಿಯನ್ ಪ್ರೀಮಿಯರ್‌ ಲೀಗ್‌ (IPL 2023) ಟೂರ್ನಿಯ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಯಾಮ್ ಕುರ್ರನ್ (Sam Curren) ಅವರನ್ನು ಪಂಜಾಬ್ ಕಿಂಗ್ಸ್ ತಂಡವು 18.50 ಕೋಟಿ ರೂ. ನೀಡುವ ಮೂಲಕ ತಮ್ಮದಾಗಿಸಿಕೊಂಡಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಎಂಬ ದಾಖಲೆ ಸ್ಯಾಮ್ ಪಾಲಾಗಿದೆ. ಇದರ ಬೆನ್ನಲ್ಲೇ ಅಚ್ಚರಿ ಎಂಬಂತೆ ವೆಸ್ಟ್ ಇಂಡೀಸ್ ವಿಕೆಟ್ ಕೀಪರ್, ಸ್ಪೋಟಕ ಬ್ಯಾಟರ್ ನಿಕೋಲಸ್ ಪೂರನ್ (Nicholas Pooran) ದೊಡ್ಡ ಮೊತ್ತಕ್ಕೆ ಸೇಲ್ ಆಗಿದ್ದಾರೆ.

2 ಕೋಟಿ ಮೂಲಬೆಲೆ ಹೊಂದಿದ್ದ ಪೂರನ್ ಖರೀದಿಗೆ ಕಠಿಣ ಪೈಪೋಟಿ ನಡೆದವು. ಲಕ್ನೋ ಸೂಪರ್ ಜೇಂಟ್ಸ್ ಕೊನೆಯವರೆಗೂ ಕೈಬಿಡದೆ ಬರೋಬ್ಬರಿ 16 ಕೋಟಿಗೆ ಖರೀದಿ ಮಾಡಿದೆ. ಪೂರನ್ ಸದ್ಯ ಕಳಪೆ ಫಾರ್ಮ್​​ನಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​ನಲ್ಲೂ ಉತ್ತಮ ಪ್ರದರ್ಶನ ತೋರಲಿಲ್ಲ. ಹೀಗಾಗಿ ವೆಸ್ಟ್ ಇಂಡೀಸ್ ನಾಯಕತ್ವದಿಂದಲೂ ಕೆಳಗಿಳಿದಿದ್ದರು. ಹೀಗಿದ್ದರೂ ಇವರು ಇಷ್ಟು ದೊಡ್ಡ ಮೊತ್ತಕ್ಕೆ ಸೇಲ್ ಆಗಿರುವುದು ಅಚ್ಚರಿ ನೀಡಿದೆ.

ಕುರ್ರನ್ ಖರೀದಿಗೆ ಮುಗಿಬಿದ್ದ ಫ್ರಾಂಚೈಸಿಗಳು:

ಐಪಿಎಲ್ 2023 ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಯಾಮ್ ಕುರ್ರನ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್​, ಎಸ್​ಆರ್​​ಹೆಚ್​, ಮುಂಬೈ ಇಂಡಿಯನ್ಸ್​ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು. ಆದರೆ, ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಂಡವು 18.50 ಕೋಟಿ ರೂ. ನೀಡುವ ಮೂಲಕ ಸ್ಯಾಮ್ ಕುರ್ರನ್ ಅವರನ್ನು ತಮ್ಮದಾಗಿಸಿಕೊಂಡಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಎಂಬ ದಾಖಲೆ ಸ್ಯಾಮ್ ಪಾಲಾಗಿದೆ.

ದೊಡ್ಡ ಮೊತ್ತಕ್ಕೆ ಗ್ರೀನ್-ಸ್ಟೋಕ್ಸ್ ಸೇಲ್:

ಆಲ್ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಎಲ್​ಎಸ್​ಜಿ ದಾಖಲೆಯ 16.25 ಕೋಟಿ ಮೊತ್ತಕ್ಕೆ ಪಡೆದುಕೊಂಡಿದೆ. ಇದರ ನಡುವೆ ಆಸ್ಟ್ರೇಲಿಯಾದ ಕ್ಯಾಮ್ರೊನ್ ಗ್ರೀನ್ ಭರ್ಜರಿ ಮೊತ್ತಕ್ಕೆ ಮರಾಟ ಆಗಿದ್ದಾರೆ. ಗ್ರೀನ್ ಖರೀದಿಗೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಕಠಿಣ ಪೈಪೋಟಿ ನಡೆದವು. 17.5 ಕೋಟಿ ನೀಡಿ ರೋಹಿತ್ ಶರ್ಮಾ ತಂಡ ಗ್ರೀನ್ ಅವರಿಗೆ ಮಣೆ ಹಾಕಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ಸ್ಟಾರ್ ಆಟಗಾರ ಹ್ಯಾರಿ ಬ್ರೂಕ್ ಕೂಡ ಕೋಟಿ ಮೊತ್ತಕ್ಕೆ ಹರಾಜಾದರು. 1.50 ಕೋಟಿ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ 23 ವರ್ಷದ ಯುವ ಸ್ಪೋಟಕ ದಾಂಡಿಗನನ್ನು ಸನ್​ರೈಸರ್ಸ್​ ಹೈದರಾಬಾದ್ ತಂಡವು ಬರೋಬ್ಬರಿ 13.25 ಕೋಟಿ ರೂ. ನೀಡಿ ಖರೀದಿಸಿತು.

ಐಪಿಎಲ್​ ಮಿನಿಹರಾಜು ಪ್ರಕ್ರಿಯೆ ಲೈವ್​

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/ipl-2023-auction-nicholas-pooran-is-sold-to-lsg-for-inr-16-crore-latest-ipl-auction-news-in-kannada-vb-au48-489796.html

Leave a Reply

Your email address will not be published. Required fields are marked *