Nitya Bhavishya 6 February: ಇಂದು ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಬೇಕಾಗುವುದು.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ವ್ಯಾಘಾತ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 15:40 ರಿಂದ 17:06ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:54 ರಿಂದ 11:20 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:47 ರಿಂದ 14:13ರ ವರೆಗೆ.

ಮೇಷ ರಾಶಿ :ಇಂದು ನಿಮ್ಮ ಪ್ರತಿಭೆಯಿಂದ ಉತ್ತಮ ಸ್ಥಾನವನ್ನು ಗಳಿಸುವಿರಿ. ನಿಮ್ಮ ಕುಟುಂಬದ ವಾತಾವರಣವು ಸ್ವಲ್ಪ ಆತಂಕದಿಂದ‌ ಕೂಡಿರಬಹುದು. ಕೆಲಸದಲ್ಲಿರುವ ಅಧಿಕಾರಿಗಳಿಗೆ ನಿಮ್ಮ ಸಲಹೆಯನ್ನು ಕೊಡಲು ಹೋಗಬೇಡಿ. ನೀವು ಸುಲಭವಾಗಿ ಜನರ ವಿಶ್ವಾಸವನ್ನು ಗಳಿಸುವಿರಿ. ನೀವು ಸ್ನೇಹಿತರಿಂದ ಹೆಚ್ಚು ಸಂತೋಷವನ್ನು ಪಡೆಯುತ್ತೀರಿ. ನಿಮ್ಮ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಆದರೆ ಅದರ ಬಗ್ಗೆ ಸಾಕಷ್ಟು ಯೋಚಿಸಿ ಮುಂದುವರಿಯಿರಿ. ಸ್ವಭಾವವು ಬಹಳ ತೀವ್ರವಾಗಿ ಇರಲಿದೆ. ಯಾರ ಮಾತನ್ನೂ ಕೇಳವ ಸಹನೆ ಇರದು.‌ ಪ್ರತಿಸ್ಪರ್ಧಿಗಳಿಗೆ ಸರಿಯಾದ ಸ್ಪರ್ಧೆಯನ್ನು ಕೊಡುವಿರಿ. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ಮಾನಸಿಕವಾಗಿ ಉತ್ಸಾಹವು ಕಡಿಮೆ ಇರುವುದು. ಹಣದ ಉಳಿತಾಯಕ್ಕೆ ಬೇಕಾದ ಮಾರ್ಗವನ್ನು ನೀವು ಆರಿಸಿಕೊಳ್ಳುವುದು ಸೂಕ್ತ. ಕೃಷಿಯಲ್ಲಿ ನೀವು ಹೆಚ್ಚು ಪ್ರಗತಿಯನ್ನು ಸಾಧಿಸುವ ಮನಸ್ಸು ಇರುವುದು.

ವೃಷಭ ರಾಶಿ :ನಿಮ್ಮ ಕೆಲಸದ ಮೇಲೆ ನೀವು ಸಂಪೂರ್ಣ ಗಮನವಿಲ್ಲದೇ ಯಾವುದೋ ಯೋಚನೆಯಲ್ಲಿ ಎಡವಟ್ಟು ಮಾಡಿಕೊಳ್ಳುವಿರಿ. ನಿಮ್ಮ ಸೌಕರ್ಯವು ಹೆಚ್ಚಾಗುತ್ತದೆ ಎಂದು ಖುಷಿ ಪಡುವ ಬದಲು ಆಲಸ್ಯದತ್ತ ನಿಮ್ಮ ನಡೆ ಇರಲಿದೆ. ನೀವು ಚಿಕ್ಕ ಮಕ್ಕಳ ಜೊತೆ ಸ್ವಲ್ಪ ಸಮಯ ಮೋಜು ಮಾಡುತ್ತೀರಿ. ಆಲಸ್ಯದಿಂದ ಎದ್ದಾಗ ಮಾತ್ರ ನೀವು ನಿಮ್ಮ ಅನೇಕ ಕಾರ್ಯಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ಸದಸ್ಯರ ಅಗತ್ಯತೆಗಳ ಬಗ್ಗೆ ನೀವು ಗಮನ ಹರಿಸಬೇಕು. ನಿಮ್ಮ ಪ್ರತಿಭೆಗೆ ಯೋಗ್ಯವಾದ ಕಾರ್ಯವು ಸಿಗುವುದು. ಭೂಮಿಯ ವ್ಯವಹಾರವನ್ನು ಒಬ್ಬೊಂಟಿಯಾಗಿ ನಿರ್ವಹಿಸುವಿರಿ. ಸಹೋದ್ಯೋಗಿಗಳಿಂದ ಅನಿವಾರ್ಯವಾಗಿ ಸಹಾಯವನ್ನು ಪಡೆಯುವಿರಿ.‌ ಸ್ವಾರ್ಥವನ್ನು ಬಿಟ್ಟು ಬೇರೆ ಕಡೆ ಯೋಚನೆಯನ್ನು ಮಾಡಲಾರಿರಿ. ಅಭದ್ರತೆಯನ್ನು ನೀವು ದೂರಮಾಡಿಕೊಳ್ಳುವುದು ಉತ್ತಮ.

ಮಿಥುನ ರಾಶಿ :ಇಂದು ನಿಮ್ಮ ಪ್ರಮುಖ ಕೆಲಸಗಳು ವೇಗದಿಂದ ಸಾಗುವುದು. ನಿಮಗೆ ಅಯಾಚಿತವಾಗಿ ಬರುವ ಶುಭಸಂದರ್ಭವನ್ನು ಸಂತೋಷಿಸುವಿರಿ. ಮೇಲಧಿಕಾರಿಗಳ ಕೋಪವನ್ನು ನಿಯಂತ್ರಣದಲ್ಲಿ ಇರಿಸಲು ನಿಮ್ಮ ಪಾತ್ರವೂ ಮುಖ್ಯವಾಗಿರಲಿದೆ. ಇಂದು ನಿಮ್ಮ ಸಣ್ಣ ವ್ಯಾಪಾರಗಳು ಹೆಚ್ಚಾಗುತ್ತದೆ. ಸಕಾರಾತ್ಮಕ ವಿಷಯಗಳು ವೇಗವನ್ನು ಪಡೆಯುತ್ತವೆ.‌ ಮಕ್ಕಳಿಗಾಗಿ ನೀವು ಹೊಸ ವಾಹನವನ್ನು ಖರೀದಿಸಬಹುದು. ನಿಮ್ಮ ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಲು ನೀವು ಯೋಚಿಸುತ್ತಿದ್ದರೆ, ಈಡೇರುತ್ತದೆ. ಹಳೆಯ ಯೋಜನೆಗಳಿಗೆ ಪುನಶ್ಚೇತನವನ್ನು ನೀಡುವಿರಿ. ಪ್ರಭಾವೀ ಶತ್ರುಗಳನ್ನು ನೀವು ಸೋಲಿಸುವಿರಿ. ಅಜಾಗರೂಕತೆಯಿಂದ ನಿಮಗೆ ನಷ್ಟ ಮಾಡಿಕೊಳ್ಳುವಿರಿ. ಕಾಲು ನೋವು ಹೆಚ್ಚಾಗಿದ್ದು ವೈದ್ಯರ ಸಲಹೆಯನ್ನು ಪಡೆಯುವಿರಿ. ನಿಮ್ಮ ದಿನಚರ್ಯೆಯನ್ನು ಬದಲಿಸಿಕೊಳ್ಳಲು ಇಷ್ಟಪಡುವಿರಿ.

ಕರ್ಕಾಟಕ ರಾಶಿ :ನಿಮಗೆ ಸಂಬಂಧಗಳಲ್ಲಿ ಗೌರವವನ್ನು ಕಾಪಾಡಿಕೊಳ್ಳುವುದು ಕಷ್ಟವಾದೀತು. ನಿಮ್ಮ ಎಲ್ಲ‌ ಮಾತುಗಳಿಗೂ ಅಪಾರ್ಥವನ್ನು ಮಾಡಿಯಾರು. ನ್ಯಾಯಾಂಗದ ವಿಷಯಗಳಲ್ಲಿ ನೀವು ತಾಳ್ಮೆಯನ್ನು ಕಾಪಾಡಿಕೊಳ್ಳಬೇಕು. ಅಗತ್ಯ ಕೆಲಸಗಳಿಗೆ ಆತುರದಲ್ಲಿ ಮುನ್ನಡೆಯದೇ ಸಮಚಿತ್ತದಿಂದ ಇದ್ದರೆ ನಿಮಗೆ ಒಳ್ಳೆಯದಾಗುತ್ತದೆ. ಧಾರ್ಮಿಕ‌ಕಾರ್ಯಗಳಿಗೆ ನಿಮ್ಮ ಸಲಹೆಯನ್ನು ಪಡೆಯಬಹುದು. ಶುದ್ಧ ಮನಸ್ಸಿನಂತೆ ತೋರಿದರೂ ಅಂತರಂಗದಲ್ಲಿ ಕಲ್ಮಶವು ಹೆಚ್ಚಿರುವುದು. ವಿವಾಹದ ಮಾತುಕತೆಗಳನ್ನು ನಡೆಸಲು ದೂರದ ಊರಿಗೆ ಪ್ರಯಾಣ ಮಾಡುವಿರಿ. ಜಾಣ್ಮೆಯಿಂದ ನಿಮ್ಮ ಕೆಲಸವನ್ನು ಬೇಗ ಪೂರ್ಣ‌ಮಾಡುವಿರಿ. ಉದ್ಯೋಗದಲ್ಲಿ ಹೊಸ ವಿಚಾರಗಳನ್ನು ನೀವು ಕಲಿಯಬೇಕಾಗುವುದು. ಕಳೆದುಕೊಂಡಷ್ಟು ವೇಗವಾಗಿ ಉಳಿಸಿಕೊಳ್ಳುವುದು ಕಷ್ಟವೆನಿಸುವುದು. ನಿಮ್ಮ ಮಾತಿಗೆ ಇಂದು ವಿರೋಧವು ಉಂಟಾಗುವುದು. ‌ಅಪರಿಚರ ಜೊತೆ ವ್ಯವಹಾರವು ಸರಿಯಾಗಿ ಇರಲಿ. ತಂದೆಯ ಮೇಲೆ‌ ನಿಮಗೆ ಬೇಸರ ಬರಬಹುದು.

ಸಿಂಹ ರಾಶಿ :ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕುಟುಂಬದಲ್ಲಿ ಜಗಳ ಉಂಟಾಗಬಹುದು. ನೀವು ಎಲ್ಲ ವಿಷಯಗಳನ್ನು ಸರಿಯಾದ ತಿಳಿವಳಿಕೆಯಿಂದ ಎದುರಿಸಬೇಕಾಗುತ್ತದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಅತಿಯಾದ ಕಾರ್ಯದಿಂದ ನಿಮಗೆ ತೊಂದರೆಯಾದೀತು. ಮನೆಯಲ್ಲಿಯೇ ವಾಸಿಸುವವರು ಸಣ್ಣ ಆದಾಯದ ಬಗ್ಗೆ ಆಲೋಚಿಸುವಿರಿ. ಯಾರಾದರೂ ಮುಖಸ್ತುತಿಯನ್ನು ಮಾಡಬಹುದು. ಮುಜುಗರವೂ ನಿಮಗೆ ಆದೀತು. ವಾಮಮಾರ್ಗದಿಂದ ಹಣವನ್ನು ಸಂಪಾದಿಸುವ ಮನಸ್ಸು ಇರಲಿದೆ. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು. ಮನೆಯಲ್ಲಿ ಅಶಾಂತಿಯ ವಾತಾವರಣವು ಸರಿಮಾಡಿಕೊಳ್ಳಿ. ಬೇಗ ಸಿಟ್ಟು ಮಾಡಿಕೊಂಡರೂ ಕ್ಷಣ ಕಾಲದಲ್ಲಿ ಸರಿಯಾಗುವುದು. ತಾಯಿಯು ನಿಮಗೆ ಹಿತವಚನವನ್ನು ಹೇಳುವರು.

ಕನ್ಯಾ ರಾಶಿ :ಇಂದು ನಿಮ್ಮ ಭಾವನೆಗಳನ್ನು ನಿಯಂತ್ರಿಸಲಾಗದು. ಮಕ್ಕಳ‌ ದೋಷವನ್ನೇ ಮತ್ತೆ ಮತ್ತೆ ಹೇಳುತ್ತಾ ಇರುವುದು ಬೇಡ. ನೀವು ಮನೆಯ ಸೌಂದರ್ಯದ ಬಗ್ಗೆ ಹೆಚ್ಚು ಗಮನ ಇರಲಿದೆ. ಹಿತಶತ್ರುಗಳಿಂದ ನಿಮಗೆ ತೊಂದರೆ ಇರಬಹುದು. ರಾಜಕೀಯದಲ್ಲಿ ಕೈ ಹಾಕಲು ಪ್ರಯತ್ನಿಸುವವರು ಎಲ್ಲವನ್ನೂ ಎದುರಿಸುವ ಶಕ್ತಿಯನ್ನು ಪಡೆದುಕೊಳ್ಳಬೇಕು. ನಿಮ್ಮ ಆದಾಯವು ಮೊದಲಿಗಿಂತ ಉತ್ತಮವಾಗಿದ್ದು ಅದನ್ನು ಒಂದು ಕಡೆ ಸ್ಥಿರವಾಗಿಸಿಕೊಳ್ಳಿ. ಹಿರಿಯರು ನಿಮ್ಮ‌ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡಲು ಇಷ್ಟವಾಗದು. ರಾಜಕೀಯವಾಗಿ ಹಿನ್ನಡೆಯಾಗಬಹುದು. ನಿಮ್ಮದಾದ ದ್ವೀಪವನ್ನು ಮಾಡಿಕೊಂಡು ನೀವಿರುವಿರಿ. ವ್ಯವಹಾರದಲ್ಲಿ ಹೊಸ ತಂತ್ರವನ್ನು ನೀವು ರೂಪಿಸಿಕೊಳ್ಳಬೇಕಾದೀತು. ಸಿಟ್ಟಾಗುವ ಸಂದರ್ಭದಲ್ಲಿ ತಾಳ್ಮೆಯನ್ನು ಇಟ್ಟುಕೊಳ್ಳಿ. ಹಳೆಯ ನೋವುಗಳು ನಿಮ್ಮನ್ನು ಕಾಡಿಸಿಯಾವು.

ತುಲಾ ರಾಶಿ :ನೀವು ಸಂಬಂಧಗಳಿಗೆ ಹೆಚ್ಚು ಬದ್ಧರಾಗಿ ಇರುವಿರಿ. ಯಾವುದೇ ಕಾರಣಕ್ಕೂ ಬಿಟ್ಟುಕೊಡಲು ಇಷ್ಟಪಡಲಾರಿರಿ. ಎಲ್ಲರ ಜೊತೆ ಬೆರೆಯುವುದು ನಿಮಗೆ ಖುಷಿಯ ವಿಚಾರವಾಗಲಿದೆ. ನಿಮ್ಮ ಹಿರಿಯರ ಜೊತೆ ಗೌರವವನ್ನು ಕಾಪಾಡಿಕೊಳ್ಳಿ. ನಿಮಗೆ ಯಾರಾದರೂ ಉದ್ಯಮಕ್ಕೆ ಸಂಬಂಧಿಸಿದ ಸಲಹೆಯನ್ನು ನೀಡಬಹುದು. ಆದೇ ಅದನ್ನು ಜಾರಿಗೊಳಿಸುವ ಮೊದಲು ಚಿಂತಿಸಿ. ವಿದ್ಯಾರ್ಥಿಗಳು ಬೌದ್ಧಿಕ ಮತ್ತು ಮಾನಸಿಕ ಒತ್ತಡದಿಂದ ಮುಕ್ತರಾಗಬೇಕಾಗುವುದು. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಬಗ್ಗೆ ಯೋಚನೆ ಇರಲಿದೆ. ಪ್ರಯಾಣದಲ್ಲಿ ಯಾವುದೇ ತೊಂದರೆಗಳು ಬಾರದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ. ಮಕ್ಕಳಿಗಾಗಿ ಮಾಡಿದ ಖರ್ಚು ನಿಮಗೆ ಸಾರ್ಥಕ ಎನಿಸಬಹುದು. ಸಂಗಾತಿಗೆ ನಿಮ್ಮ ಉಡುಗೊರೆಯು ಇಷ್ಟವಾಗದು.‌

ವೃಶ್ಚಿಕ ರಾಶಿ :ನಿಮ್ಮ ಕುಟುಂಬದ ಸಂತೋಷದಲ್ಲಿ ನೀವು ಹೆಚ್ಚು ಆಸಕ್ತಿ ಹೊಂದಿರುತ್ತೀರಿ. ನಿಮ್ಮ ಕಾರ್ಯಗಳಿಂದ ಪ್ರೀತಿಪಾತ್ರರ ಹೃದಯವನ್ನು ಗೆಲ್ಲಲು ಸಫಲರಾಗುವಿರಿ. ಸರ್ಕಾರಿ ಕಾರ್ಯದಿಂದ ಒಳ್ಳೆಯ ಸುದ್ದಿ ಕೇಳುವ ಸಾಧ್ಯತೆ ಇದೆ. ಮನೆಯಿಂದ ಹೊರಗಿರುವವರ ಕುಟುಂಬ ಸದಸ್ಯರನ್ನು ಭೇಟಿ ಮಾಡಬಹುದು. ನಿಮ್ಮ ಮನಸ್ಸು ಯಾವುದೋ ಒಂದು ವಿಷಯದಲ್ಲಿ ಗಹನವಾಗಿ ಇರಬಹುದು. ಬಹಳ‌ ದಿನಗಳ ಅನಂತರ ನಿಮ್ಮ ಸಂಗಾತಿಯ ಜೊತೆ ಸ್ವಲ್ಪ ಸಮಯ ಕುಳಿತು ಆಪ್ತವಾಗಿ ಮಾತನಾಡುವಿರಿ. ಯಾರನ್ನೂ ಅವಲಂಬಿಸುವುದು ನಿಮಗೆ ಕಷ್ಟವಾಗುವುದು. ಮಕ್ಕಳಿಂದ ನಿಮಗೆ ಕೀರ್ತಿಯು ಪ್ರಾಪ್ತವಾಗುವುದು. ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಅಧಿಕಾರವು ಸಿಗಬಹುದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿ ಹಣವನ್ನು ವ್ಯಯ ಮಾಡುವಿರಿ. ನಿಮಗೆ ಆಗಬೇಕಾದ ಕೆಲಸವನ್ನು ವಿವಾದ ಇಲ್ಲದೇ ಮಾಡಿಕೊಳ್ಳಿ. ಆಪ್ತರ ಬಗೆಗಿನ ಊಹೆಯು ವ್ಯತ್ಯಾಸವಾದೀತು. ವಾಹನವನ್ನು ಸರಿ ಮಾಡಿಸಲು ಹಣವು ಖರ್ಚಾಗಲಿದೆ.

ಧನು ರಾಶಿ :ಇಂದು ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಬೇಕಾಗುವುದು. ನಿಮ್ಮ ಯಾವುದೇ ಸಂಬಂಧದ ಜೊತೆ ರಾಜಿ ಮಾಡಿಕೊಳ್ಳಲು ಹೋಗಬಹುದು. ಅವಿವಾಹಿತರ ಜೀವನದಲ್ಲಿ ಹೊಸ ಅತಿಥಿಯ ಆಗಮನದ ನಿರೀಕ್ಷೆಯು ಇರುವುದು. ನಿಮ್ಮ ಆಪ್ತರ ಜೊತೆ ಸ್ವಲ್ಪ ಸಮಯ ಮೋಜು ಮಾಡುತ್ತೀರಿ. ಆಧ್ಯಾತ್ಮದಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ಸ್ಪರ್ಧೆಯ ವಿಷಯದಲ್ಲಿ ಮುನ್ನುಗ್ಗುವ ಸ್ವಭಾವವು ಇರಲಿದೆ. ಪ್ರೀತಿಪಾತ್ರರ ಜೊತೆ ನಿಮ್ಮ ಆಪ್ತತೆ ಹೆಚ್ಚಾಗಬಹುದು. ದೂರ ಪ್ರಯಾಣವನ್ನು ನೋವು ಹೆಚ್ಚು ಇಷ್ಟಪಡುವಿರಿ. ತಂದೆಯಿಂದ ಸಹಕಾರವನ್ನು ಪಡೆಯುವಿರಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ಪ್ರೇಮದಲ್ಲಿ ಯಾರನ್ನಾದರೂ ಬೀಳಿಸಿಕೊಳ್ಳುವ ಕಲೆ ನಿಮಗೆ ತಿಳಿದುಬರುವುದು. ವ್ಯರ್ಥ ಓಡಾಟದಿಂದ ಬೇಸರವಾಗುವುದು. ಒತ್ತಡದ ಕಾರ್ಯದಿಂದ ನೀವು ದೂರ ಉಳಿಯುವಿರಿ. ಇಂದು ಯಾರ ಮಾತನ್ನೂ ಪೂರ್ಣವಾಗಿ ನಂಬಲು ಆಗದು.

ಮಕರ ರಾಶಿ :ಇಂದು ನೀವು ನಿಯಮಗಳ ಉಲ್ಲಂಘನೆಗೆ ಪ್ರಾಶಸ್ತ್ಯ ಕೊಡುವುದು ಬೇಡ. ನಿಮ್ಮ ಆದಾಯ ಮತ್ತು ಖರ್ಚುಗಳನ್ನು ನೀವು ಸಮವಲ್ಲದಿದ್ದರೂ ತೊಂದರೆಯಾಗದಂತೆ ನಿಭಾಯಿಸುವಿರಿ. ಅದು ನಿಮಗೆ ಒಳ್ಳೆಯದು. ಇಲ್ಲವಾದರೆ ಹೆಚ್ಚುತ್ತಿರುವ ಖರ್ಚುಗಳ ಬಗ್ಗೆ ನೀವು ಚಿಂತೆ ಮಾಡುತ್ತೀರಿ. ಕುಟುಂಬದಲ್ಲಿನ ಸಣ್ಣ ತಪ್ಪುಗಳನ್ನು ನೀವು ಉದಾತ್ತತೆಯಿಂದ ಕ್ಷಮಿಸಬಿಡಿ. ಅದನ್ನು ದೊಡ್ಡ ಮಾಡಿಕೊಂಡು ಮಾನಸಿಕವಾಗಿ ನೋಯುವುದು ಬೇಡ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ. ಯಂತ್ರಗಳ ಮಾರಾಟದಿಂದ ಹೆಚ್ಚಿನ ಲಾಭಾಂಶವನ್ನು ಪಡೆಯುವಿರಿ. ಸಹೋದ್ಯೋಗಿಗಳ ಕಿರಿಕಿರಿಯಿಂದ ಉದ್ಯೋಗವನ್ನು ಬದಲಿಸುವಿರಿ. ಇಂದು ಸ್ತ್ರೀಯರಿಗೆ ಅನಿರೀಕ್ಷಿತ ತೊಂದರೆಗಳು ಇರಲಿದೆ. ನೆರೆಹೊರೆಯರ ಜೊತೆ ವಾಗ್ವಾದ‌ ಮಾಡುವಿರಿ. ಬಾಡಿಗೆ ಮನೆಯ ಮಾಲಿಕರಿಂದ ನಿಮಗೆ ಏನಾದರೂ ಆಗಬಹುದು. ಸರ್ಕಾರದ ಕಡೆಯಿಂದ ನಿಮ್ಮ ಕೆಲಸಕ್ಕೆ ಒಪ್ಪಿಗೆ ಸಿಗುವುದು. ಎಂತಹ ಪರಿಣತಿ ಇದ್ದರೂ ಎಡವುವುದು ಸಹಜವಾಗಲಿದೆ.

ಕುಂಭ ರಾಶಿ :ಬಹಳ ದಿನಗಳ ನಿಮ್ಮ ಪ್ರಯತ್ನಕ್ಕೆ ಫಲವು ಸಿಗಲಿದೆ. ಮಾತಿನಿಂದ ನಿಮಗೆ ಕೆಲವು ಬಂಧಗಳು ಕಳಚಿಕೊಳ್ಳಬಹುದು. ಇಂದು ನೀವು ವಿಶ್ರಾಂತಿ ಪಡೆಯುವುದಿಲ್ಲ. ಕೌಟುಂಬಿಕ ಕಲಹದಿಂದಾಗಿ ನಿಮ್ಮ ತಲೆನೋವು ಇರುತ್ತದೆ. ಇದರಿಂದ ನೀವು ಯಾವುದೇ ಕೆಲಸ ಮಾಡಲು ಬಯಸುವುದಿಲ್ಲ. ವ್ಯಾಪಾರ ಮಾಡುವ ಜನರ ಜೊತೆ ಸೇರಿ ಕೆಲವು ಕೆಲಸಗಳನ್ನು ಮಾಡಲು ಅವಕಾಶವಿದೆ. ನೀವು ಆನ್‌ಲೈನ್‌ ಶಾಪಿಂಗ್ ನಿಂದ ಏನಾದರೂ ನಿಮ್ಮಿಂದ ತಪ್ಪಾಗಬಹುದು. ನೀವು ಎಣಿಸಿದ್ದನ್ನು ಬಂಧುಗಳು ಮಾಡಿಕೊಡುವರು. ನಿಮ್ಮ ವಿನಂತಿಯನ್ನು ಯಾರೂ ಪುರಸ್ಕರಿಸದೇ ಇರಬಹುದು. ನಿಮಗೆ ಬೇರೆ ಬೇರೆ ಮೂಲಗಳಿಂದ ಸಂಪಾದನೆಗೆ ಇಂದು ಅವಕಾಶಗಳು ಸಿಗುವುದು. ಇಷ್ಟಮಿತ್ರರ ಭೇಟಿಯಿಂದ ಖುಷಿಯು ಹೆಚ್ಚಾಗುವುದು. ಹಣದ ಮೂಲವನ್ನು ಹುಡುಕುವ ಪ್ರಯತ್ನವು ಪೂರ್ಣ ಫಲಿಸದು. ಸ್ವಂತ ಕಾರ್ಯವೇ ಹೆಚ್ಚಾಗಬಹುದು.

ಮೀನ ರಾಶಿ :ನಿಮ್ಮ ಒಳ್ಳೆಯ ಅಭ್ಯಾಸಗಳು ನಿಮಗೆ ಉಪಯೋಗಕ್ಕೆ ಬರಲಿವೆ. ನೀವು ಕ್ರಿಯಾ ಯೋಜನೆಯನ್ನು ತಯಾರಿಸಿದರೆ ಯಶಸ್ಸಿಗೆ ಸಮೀಪವಾಗುವಿರಿ. ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವವರು ತಮ್ಮ ಪ್ರಯತ್ನಗಳಲ್ಲಿ ಯಾವುದೇ ಸಡಿಲಿತೆ ಬೇಡ. ನೀವು ಅಪರಿಚಿತರೊಂದಿಗೆ ಜಾಗರೂಕರಾಗಿರಬೇಕು. ಎಸೆದ ಕಲ್ಲನ್ನು ಮೆಟ್ಟಿಲು ಮಾಡಿಕೊಳ್ಳುವುದನ್ನು ಕಲಿಯಬೇಕು. ಆತುರದಲ್ಲಿ ನಿಮ್ಮ ಕಾರ್ಯವು ನಡೆಯಬಹುದು. ದೂರದ ಪ್ರಯಾಣಕ್ಕೆ ಹೋಗುವ ಯೋಗ ಆಕಸ್ಮಿಕವಾಗಿ ಬರಬಹುದು. ಬಂಧುಗಳು ಮನೆಗೆ ಬಂದ ಕಾರಣ ಖರ್ಚು ಹೆಚ್ಚಾದೀತು. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ. ವ್ಯರ್ಥ ಸುತ್ತಟದಿಂದ ನೀವು ಸಿಟ್ಟಾಗುವಿರಿ. ನಿಮ್ಮ ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಅಧಿಕವಾಗಿರುವುದು.‌ ಯಾರನ್ನೂ ಜೊತೆಗೆ ಕರೆದುಕೊಂಡು ಹೋಗುವ ಅಭ್ಯಾಸವಿಲ್ಲ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *