Siddaramaiah: ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಮುಂಬೈ ಪಂದ್ಯ ವೀಕ್ಷಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಿತು. ಆರ್​ಸಿಬಿ 8 ವಿಕೆಟ್​ಗಳ ಜಯದೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಿದರೆ ಮುಂಬೈ ಮೊದಲ ಪಂದ್ಯದಲ್ಲಿ ಸೋತು ಹಳೆ ಚಾಳಿಯನ್ನು ಮುಂದುವರೆಸಿದೆ.ಇದರ ನಡುವೆ ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಹೀಗಿದ್ದರೂ ಚುನಾವಣಾ ಪ್ರಚಾರದ ಒತ್ತಡದಿಂದ ರಿಲ್ಯಾಕ್ಸ್ ಮೂಡ್​ಗೆ ಜಾರಿದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರ್​ಸಿಬಿ- ಮುಂಬೈ ನಡುವಿನ ರೋಚಕ ಪಂದ್ಯ ವೀಕ್ಷಿಸಲು ಕ್ರೀಡಾಂಗಣದಲ್ಲಿ ಹಾಜರಿದ್ದರು.ಕಟ್ಟಾ ಕ್ರಿಕೆಟ್ ಅಭಿಮಾನಿಯಾಗಿರುವ ಸಿದ್ದರಾಮಯ್ಯ ಅವರು ಚುನಾವಣಾ ಕೆಲಸಕ್ಕೆ ವಿರಾಮ ನೀಡಿ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ನೋಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.ಈ ಕುರಿತು ಟ್ವೀಟ್ ಕೂಡ ಮಾಡಿರುವ ಸಿದ್ದರಾಮಯ್ಯ, ''ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್‌ಸಿಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ,'' ಎಂದು ಪಂದ್ಯ ವೀಕ್ಷಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.ಸಿದ್ದರಾಮಯ್ಯ ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯ ನೋಡಲು ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಇಲ್ಲಿ ಐಪಿಎಲ್ ನಡೆದಾಗ ಅನೇಕ ಮ್ಯಾಚ್​ಗಳನ್ನು ನೋಡಲು ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದರು.ಈ ಬಾರಿ ಸಿದ್ದರಾಮಯ್ಯ ಅವರ ಜೊತೆ ಪಂದ್ಯ ವೀಕ್ಷಿಸಲು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕೂಡ ಹಾಜರಿದ್ದರು.……ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ 50 ರನ್​ಗು ಮೊದಲೇ ಪ್ರಮುಖ 4 ವಿಕೆಟ್ ಕಳೆದುಕೊಂಡು ತಂಡದ ಮೊತ್ತ 100 ದಾಟುವುದು ಕಷ್ಟವಾಗಿತ್ತು. ಆದರೆ, 20ನೇ ಓವರ್ ವರೆಗೂ ಟೊಂಕ ಕಟ್ಟಿ ಕ್ರೀಸ್​ನಲ್ಲಿ ನಿಂತ ಯುವ ಬ್ಯಾಟರ್ ತಿಲಕ್ ವರ್ಮಾ (ಅಜೇಯ 84) 171 ರನ್​ಗಳ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.ಆದರೆ, ವಿರಾಟ್ ಕೊಹ್ಲಿ (ಅಜೇಯ 82) ಹಾಗೂ ನಾಯಕ ಫಾಫ್ ಡುಪ್ಲೆಸಿಸ್ (73) ಅವರ ಅಮೋಘ ಬ್ಯಾಟಿಂಗ್ ವೈಭವದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿತು.

source https://tv9kannada.com/photo-gallery/cricket-photos/karnataka-former-cm-siddaramaiah-visited-chinnaswamy-stadium-to-watch-rcb-vs-mi-ipl-2023-match-kannada-news-vb-au48-548235.html

Views: 0

Leave a Reply

Your email address will not be published. Required fields are marked *