ಮಾಹಿತಿ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಜ.25) : ಜಿಲ್ಲಾಡಳಿತ ವತಿಯಿಂದ ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 7.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭುಜಿ.ಆರ್.ಜೆ ಧ್ವಜಾರೋಹಣ ನೆರೆವೇರಿಸುವರು.
ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣಲ್ಲಿ ಜಿಲ್ಲಾ ಮಟ್ಟದ ಗಣರೋಜ್ಯೊತ್ಸವ ಆಚರಣೆಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸುವರು. ಸಂಜೆ 6 ಗಂಟೆಗೆ ತರಾಸು ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ಈ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
The post ಗಣರಾಜ್ಯೋತ್ಸವ ದಿನಾಚಾರಣೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯ ಹಾಜರಾತಿಗೆ ಸೂಚನೆ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/ViZYDqt
via IFTTT