ವೈಜ್ಞಾನಿಕ ಮನೋಭಾವವನ್ನ ಪ್ರೋತ್ಸಾಹಿಸಲು ಹಾಗೂ “ಎಲ್ಲರಿಗೂ ವಿಜ್ಞಾನ” ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸುವಂತೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ವೈಜ್ಞಾನಿಕ ಮನೋಭಾವವನ್ನ ಪ್ರೋತ್ಸಾಹಿಸಲು ಹಾಗೂ “ಎಲ್ಲರಿಗೂ ವಿಜ್ಞಾನ” ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸುವಂತೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಚಂದ್ರಯಾನ – 3 ರ ಯಶಸ್ಸಿನ ನಂತರ ಮಕ್ಕಳಲ್ಲಿ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಹೆಚ್ಚಾಗಿದೆ. ಇದಕ್ಕೆ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಕುತೂಹಲವನ್ನು ಉತ್ತೇಜಿಸುವ ಸಲುವಾಗಿ ದೂರದರ್ಶಕಗಳನ್ನ (Providing Acess to Telescope) ಒದಗಿಸುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ನೀತಿ ರೂಪಿಸುವಂತೆ ಸೂಚನೆ ನೀಡಿರುವುದಾಗಿ ಸಚಿವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
https://pbs.twimg.com/media/GA6YRrOaQAAiY5r?format=jpg&name=small

ಮಕ್ಕಳು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಆಸಕ್ತಿಯನ್ನು ಹೆಚ್ಚಿಸಲು ಯೋಜನೆ: ರಾಜ್ಯದಲ್ಲಿ 2 ಪ್ರಾದೇಶಿಕ ವಿಜ್ಞಾನ ಕೇಂದ್ರಗಳು, 2 ತಾರಾಲಯಗಳು, 08 ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಿವೆ. 11 ಸಂಚಾರಿ ತಾರಾಲಯಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದ ವಿದ್ಯಾರ್ಥಿಗಳಲ್ಲಿ ಬಾಲ್ಯಾವಸ್ಥೆಯಿಂದಲೇ ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೂತನ ಯೋಜನೆಯೊಂದನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ ಟೆಲಿಸ್ಕೋಪ್ ಮತ್ತು ಮೈಕ್ರೋಸ್ಕೋಪ್ ಗಳನ್ನು ನೀಡಲು, ಹಾಗೆಯೇ, ಈ ಉಪಕರಣಗಳ ನಿರ್ವಹಣೆ ಮತ್ತು ಅವುಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಶಿಕ್ಷಕರುಗಳಿಗೆ ತರಬೇತಿಯನ್ನು ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆ ಪ್ರಾರಂಭಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1