ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಎನ್.ವಿ.ಅಂಜಾರಿಯಾ ನೇಮಕ.

  • ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇಮಕ
  • ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇಮಕವನ್ನು ಅಧಿಕೃತಗೊಳಿಸಿದ ಕೇಂದ್ರ ಸರ್ಕಾರ
  • ಕೊಲಿಜಿಯಂ ಫೆಬ್ರವರಿ 8ರಂದು ನ್ಯಾಯಮೂರ್ತಿ ಅಂಜಾರಿಯಾ ಹೆಸರನ್ನು ಹುದ್ದೆಗೆ ಶಿಫಾರಸು ಮಾಡಿತ್ತು

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರವು ಶುಕ್ರವಾರ ಅವರ ನೇಮಕವನ್ನು ಅಧಿಕೃತಗೊಳಿಸಿದೆ ಎಂದು ವರದಿಯಾಗಿದೆ.

ಫೆಬ್ರವರಿ 24ರಂದು ಹೈಕೋರ್ಟ್‌ನ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ನಿವೃತ್ತಿಯ ನಂತರ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.

ಕೊಲಿಜಿಯಂ ಫೆಬ್ರವರಿ 8 ರಂದು ನ್ಯಾಯಮೂರ್ತಿ ಅಂಜಾರಿಯಾ ಅವರ ಹೆಸರನ್ನು ಹುದ್ದೆಗೆ ಶಿಫಾರಸು ಮಾಡಿತ್ತು. ಜಸ್ಟಿಸ್ ಅಂಜಾರಿಯಾ ಅವರು ನವೆಂಬರ್ 2011ರಲ್ಲಿ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ಅಂದಿನಿಂದ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ.   ನ್ಯಾಯಾಧೀಶರಾಗುವ ಮೊದಲು ಅಂಜಾರಿಯಾ ಅವರು ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಉಚ್ಚ ನ್ಯಾಯಾಲಯದಲ್ಲಿ ಪ್ರ್ಯಾಕ್ಟೀಸ್‌ ಮಾಡಿದ್ದರು.

ಈ ಮೂಲಕ ನಾಗರಿಕ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಪರಿಣತಿಯನ್ನು ಗಳಿಸಿದ್ದರು. ಹಾಲಿ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರನ್ನು ಜನವರಿ 31, 2024ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿತ್ತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *