ODI World Cup 2023: ಭಾರತ-ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್

ODI World Cup 2023: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕುರಿತಾದ ಬಿಗ್​ ಅಪ್​ಡೇಟ್​ವೊಂದು ಹೊರಬಿದ್ದಿದೆ. ಕ್ರಿಕ್‌ಬಜ್ ವರದಿ ಪ್ರಕಾರ, ಅಹಮದಾಬಾದ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಮಹತ್ವದ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ವರದಿಯಾಗಿದೆ.
ಅಷ್ಟೇ ಅಲ್ಲದೆ ಟೂರ್ನಿಯ ಮದಗಜಗಳ ಕಾಳಗ ಇಂಡೋ-ಪಾಕ್ ಕದನಕ್ಕೂ ಡೇಟ್ ಫಿಕ್ಸ್ ಮಾಡಲಾಗಿದೆ. ಪ್ರಸ್ತುತ ವರದಿ ಪ್ರಕಾರ, ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.ಇನ್ನು ಟೂರ್ನಿಯ ಒಂದು ಸೆಮಿಫೈನಲ್​ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮತ್ತೊಂದು ಸೆಮಿ ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.ಇದಲ್ಲದೆ ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಏಕದಿನ ವಿಶ್ವಕಪ್ ಆಯೋಜಿಸಲು ನಿರ್ಧರಿಸಲಾಗಿದ್ದು, ಇದಾಗ್ಯೂ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿಲ್ಲ. ಹೀಗಾಗಿ ಆರಂಭಿಕ ಅಥವಾ ಅಂತ್ಯದ ದಿನಾಂಕದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

source https://tv9kannada.com/photo-gallery/cricket-photos/odi-world-cup-2023-india-vs-pakistan-match-to-be-held-on-this-date-kannada-news-zp-574795.html

Leave a Reply

Your email address will not be published. Required fields are marked *