Skip to content
  • Wednesday, March 25, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • ODI World Cup 2023: ವಿಶ್ವದ ಅತಿದೊಡ್ಡ ಮೈದಾನದಲ್ಲಿ ಭಾರತ- ಪಾಕ್ ವಿಶ್ವಕಪ್ ಫೈಟ್..!
Sports

ODI World Cup 2023: ವಿಶ್ವದ ಅತಿದೊಡ್ಡ ಮೈದಾನದಲ್ಲಿ ಭಾರತ- ಪಾಕ್ ವಿಶ್ವಕಪ್ ಫೈಟ್..!

May 5, 2023
samagrasuddi

ಈ ವರ್ಷ ಏಕದಿನ ವಿಶ್ವಕಪ್ ನಡೆಯಲಿದ್ದು, ಇದರ ಆಯೋಜನೆಯ ಹಕ್ಕನ್ನು ಭಾರತ ಪಡೆದುಕೊಂಡಿರುವುದು ಈ ಮಹಾ ಸಮರಕ್ಕೆ ಮತ್ತಷ್ಟು ಬೆರಗು ತಂದಿದೆ. ಇದೇ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ವಿಶ್ವಕಪ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾದರೂ ಮೂಲಗಳ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಪ್ರಾರಂಭವಾಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ನಡುವೆ ಕ್ರಿಕೆಟ್​ನ ಸಾಂಪದ್ರಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಣ ವಿಶ್ವಕಪ್ ಪಂದ್ಯ ಯಾವ ಮೈದಾನದಲ್ಲಿ ನಡೆಯಲಿದೆ ಎಂಬುದು ಎಲ್ಲರಲ್ಲಿ ಕುತೂಹಲ ಹೆಚ್ಚಿಸಿದೆ. ಏಕೆಂದರೆ ಈ ಉಭಯ ತಂಡಗಳು ಕೇವಲ ಐಸಿಸಿ ಈವೆಂಟ್​​ನಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ. ಹೀಗಾಗಿ ಈ ಮದಗಜಗಳ ಕಾಳಗವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ವಾಸ್ತವವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿದ ನಂತರ ಬಿಸಿಸಿಐ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಈ ವರ್ಷ ಏಕದಿನ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ವಿದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಾರೆ. ನರೇಂದ್ರ ಮೋದಿ ಸ್ಟೇಡಿಯಂ ವಿಶ್ವದ ಅತಿ ದೊಡ್ಡ ಕ್ರೀಡಾಂಗಣವಾಗಿದೆ. ಕ್ರೀಡಾಂಗಣವು 1 ಲಕ್ಷ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಬಿಸಿಸಿಐ ಭಾರತ-ಪಾಕಿಸ್ತಾನ ಪಂದ್ಯಕ್ಕೆ ನರೇಂದ್ರ ಮೋದಿ ಕ್ರೀಡಾಂಗಣವನ್ನು ಆಯ್ಕೆ ಮಾಡಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.ವಿಶ್ವಕಪ್‌ನಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಈ ಬಾರಿಯ ವಿಶ್ವಕಪ್ 46 ದಿನಗಳ ಕಾಲ ನಡೆಯಲಿದೆ. ಏಳು ಸ್ಥಳಗಳಲ್ಲಿ ಲೀಗ್ ಪಂದ್ಯಗಳು ನಡೆಯಲಿವೆ. ಅಹಮದಾಬಾದ್ ಹೊರತುಪಡಿಸಿ, ಈ ವಿಶ್ವಕಪ್‌ನ ಪಂದ್ಯಗಳನ್ನು ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈನಲ್ಲಿ ಆಡಿಸಲಾಗುತ್ತದೆ ಎಂದು ವರದಿಯಾಗಿದೆ.ಐಸಿಸಿಯ ಇಡೀ ಟೂರ್ನಿ ಭಾರತದಲ್ಲಿ ನಡೆಯುತ್ತಿರುವುದು ಇದೇ ಮೊದಲು. 1987 ರಲ್ಲಿ, ಭಾರತ ಮತ್ತು ಪಾಕಿಸ್ತಾನ ಎರಡೂ ಒಟ್ಟಿಗೆ ಆತಿಥ್ಯ ವಹಿಸಿದ್ದವು. 1996 ರಲ್ಲಿ ಭಾರತ, ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿದ್ದವು. 2011 ರ ವಿಶ್ವಕಪ್ ಅನ್ನು ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಆಯೋಜಿಸಿತ್ತು.

source https://tv9kannada.com/photo-gallery/cricket-photos/odi-world-cup-2023-narendra-modi-stadium-likely-to-host-india-pakistan-odi-world-cup-2023-match-psr-570854.html

Tags: samagrasuddi, ಸಮಗ್ರ ಸುದ್ದಿ

Post navigation

IPL 2023: ಆರ್​ಸಿಬಿ ಸೇರಿದಂತೆ ಈ ನಾಲ್ಕು ತಂಡಗಳು ಪ್ಲೇ ಆಫ್​ಗೇರುತ್ತವೆ ಎಂದ ಟರ್ಬನೇಟರ್
KL Rahul: ಐಪಿಎಲ್​ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದ ರಾಹುಲ್..!

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • RCB New Era:ಬೃಹತ್ ಮೊತ್ತಕ್ಕೆ ಮಾರಾಟವಾದ ಆರ್‌ಸಿಬಿ; ಹೊಸ ಮಾಲೀಕರು ಯಾರು? ಕೊಹ್ಲಿ ಭವಿಷ್ಯವೇನು? ಸಂಪೂರ್ಣ ವಿವರ.
  • UPSC ನಿಂದ ಮೆಗಾ ನೇಮಕಾತಿ: 1300ಕ್ಕೂ ಅಧಿಕ ವೈದ್ಯಾಧಿಕಾರಿ ಹುದ್ದೆಗಳು ಖಾಲಿ, ಮಾ.31 ಕಡೆ ದಿನ.
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
Copyright © 2026
CONTACT US
Theme by: Theme Horse
Proudly Powered by: WordPress