
ಚಿತ್ರದುರ್ಗ,(ಜ.04) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ.05 ರಂದು ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದಾರೆ.
ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಬೆಳಿಗ್ಗೆ 11:30 ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12:30ಕ್ಕೆ ನಗರ ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲೆ ಹೆಲಿಪ್ಯಾಡ್ಗೆ ಬಂದಿಳಿಯುವರು. ನಂತರ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಲಾಗಿರುವ ಕಾಯಕ ಜನೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3.15ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.
The post ಜನವರಿ 05 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ನಗರಕ್ಕೆ ಆಗಮನ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/bXEJ94i
via IFTTT