ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಜನವರಿ.25) : ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಜನವರಿ 26ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜನವರಿ 26ರಂದು ಬೆಳಿಗ್ಗೆ 7ಕ್ಕೆ ಹಿರೇಕೆರೂರಿನಿಂದ ಹೊರಟು 8.45ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯುವ ಭಾರತದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 12ಕ್ಕೆ ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕೆ.ಆರ್.ಶಿವಕುಮಾರ್ ತಿಳಿಸಿದ್ದಾರೆ.
The post ಜನವರಿ 26 ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/Qf42aMY
via IFTTT