ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಆ. 5 – ಹೊಳಲ್ಕೆರೆ ಒಂಟಿಕಂಬದ ಮುರುಘಾಮ ಠದಲ್ಲಿ ದಿ. 8-8-2024 ರಂದು ಗುರುವಾರ ಬೆಳಗ್ಗೆ 10.30 ಗಂಟೆಗೆ ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ 26 ನೇ ಅಧ್ಯಕ್ಷರಾದ ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳವರ 30ನೇ ರu ತ್ಸ ಹಾಗೂ ಚಿನ್ಮೂಲಾದ್ರಿಯ ಚಿತ್ಕಳೆ ಸ್ಮರಣೋತ್ಸವ ಸಂಪುಟ ಲೋಕಾರ್ಪಣೆ ಸಮಾರಂಭ ನಡೆಯಲಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ತಿಳಿಸಿದರು.

ಶ್ರೀಮಠದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಜಯದೇವ ಜಗದ್ಗುರುಗಳು ಹಸಿವನ್ನು ಹಿಂಗಿಸಿದರೆ ಮಲ್ಲಿಕಾರ್ಜುನ ಜಗದ್ಗುರುಗಳು ಜ್ಞಾನದ ಹಸಿವ ತಣಿಸಿದವರು. ಅನುಭಾವದ ನೆಲೆಯಲ್ಲಿ ಮಾತನಾಡುತ್ತಿದ್ದರು. ಮಲ್ಲಿಕಾರ್ಜುನ ಶ್ರೀಗಳವರದು ಸಾರ್ವಜನಿಕ ವಲಯದಲ್ಲಿ ಸರಳ ಮತ್ತು ವಿದ್ವತ್‌ಪೂರ್ಣವಾದ ಬದುಕಾಗಿತ್ತು . 1966ರಲ್ಲಿ ಎಸ್.ಜೆ.ಎಂ. ವಿದ್ಯಾಪೀಠವನ್ನು ಸ್ಥಾಪಿಸಿ, ಎಂಜಿನಿಯರ್ ಕಾಲೇಜಿನಿಂದ ಹಿಡಿದು ಅ ಕ ಶಿಕ್ಷಣ ಸಂಸ್ಥೆಗಳನ್ನು ತೆರೆದರು. ತುಮಕೂರು ಸಿದ್ಧಗಂಗಾ ಮಹಾಸ್ವಾಮಿಗಳು ಮಲ್ಲಿಕಾರ್ಜುನ ಶ್ರೀಗಳನ್ನು ಕುರಿತು ಸಾಕ್ಷಾತ್ ಮುರಿಗಿ ಸ್ವಾಮಿಗಳು ಎಂದು ಹೇಳುತ್ತಿದ್ದರು. ಅವರ ಬಗ್ಗೆ ಮಾತನಾಡು ವುದಕ್ಕಿಂತ ಅವರ ವ್ಯಕ್ತಿತ್ವ ದೊಡ್ಡದು. ಶ್ರೀಗಳು ಪಟ್ಟಕ್ಕೆ ಬಂದು ಮೂವತ್ತು ವರ್ಷ ಮತ್ತು ಅವರು ಲಿಂಗೈಕ್ಯರಾಗಿ 30ವರ್ಷ ಆಗುತ್ತಿರುವ ಈ ಸಂದರ್ಭವನ್ನು ಸ್ಮರಣೀಯವಾಗಿಸುವ ಹಿನ್ನೆಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಶ್ರ್ರೀಗಳವರ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶನ ಮತ್ತು ಶ್ರೀಗಳ ಕುರಿತು ಡಾ. ಲಕ್ಷ್ಮಣ ತೆಲಗಾವಿ ಪ್ರಧಾನ ಸಂಪಾದಕತ್ವದಲ್ಲಿ ಮತ್ತು ಕೆ.ಎಲ್. ರಾಜಶೇಖರ್ ಸಂಪಾದಕತ್ವದಲ್ಲಿ ಚಿನ್ಮೂಲಾದ್ರಿ ಚಿತ್ಕಳೆ ಎಂಬ ಬೃಹತ್ ಗ್ರಂಥವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ಶ್ರೀ ವೀರಭದ್ರ ಚನ್ನಮಲ್ಲದೇಶೀಕೇಂದ್ರ ಮಹಾಸ್ವಾಮಿಗಳು ನಿಡುಮಾಮಿಡಿ ಮಠ, ಬೆಂಗಳೂರು, ಇಳಕಲ್ಶ್ರೀ ಗುರುಮಹಾಂತ ಮಹಾಸ್ವಾಮಿಗಳು, ಬೆಂಗಳೂರು ಬೇಲಿಮಠದ ಶ್ರೀ ಶಿವರುದ್ರ ಮಹಾಸ್ವಾಮಿಗಳು, ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮಿಗಳು, ಧಾರವಾಡ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತರುದ್ರೇಶ್ವರ ಸ್ವಾಮಿಗಳು, ರಾ ಂದೂರು ವಿರಕ್ತಮಠದ ಶ್ರೀ ಕ್ಷಪತಿ ಮಹಾಸ್ವಾಮಿಗಳು, ಬೆಂಗಳೂರು ಸರ್ಪಭೂಷಣ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗ ಳು ಸಾನ್ನಿಧ್ಯ ವಹಿಸವರು ಎಂದರು. ಹರಿಹರ ಪಂಚ ಸಾಲಿ ಜಗದ್ಗುರು ಗುರುಪೀಠದ ಶ್ರೀ ಜಗದ್ಗುರು ವಚನಾನಂದ ಸ್ವಾಮಿಗಳು, ಶ್ರೀ ಮಾದಾರಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು, ಶ್ರೀ ಬೋವಿಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳು, ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಶ್ರೀ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳು, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಮಹಾಸ್ವಾಮಿಗಳು, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಜಗದ್ಗುರು ಪ್ರಸನ್ನ ವಾಲ್ಮೀಕಿ ಸ್ವಾಮಿಗಳು , ಹೊಸದುರ್ಗ ಕ ಕಗುg ಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮಿಗಳು, ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮಿಗಳು, ಪಾಂಡೋಮಟ್ಟಿಯ ಶ್ರೀ ಗುರುಬಸವ ಸ್ವಾಮಿಗಳು, ಬೇಲೂರು ವಿರಕ್ತ ಠದ ಶ್ರೀ ಶಿವಬಸವ ಸ್ವಾಮಿಗಳು, ಶ್ರೀ ಮಡಿವಾಳ ಮಾಚಿದೇವ ಗುರುಪೀಠದ ಶ್ರೀ ಜಗದ್ಗುರು ಬಸವ ಮಾಚಿದೇವ ಮಹಾಸ್ವಾಮಿಗಳು ಸಮ್ಮುಖ ವಹಿಸುವರು .
ಶ್ರೀಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ ಅಧ್ಯಕ್ಷತೆ ವಹಿಸುವರು. ಆಡಳಿತ ಮಂಡಳಿ ಸದಸ್ಯ ಎಸ್.ಎನ್. ಚಂದ್ರಶೇಖರ್ ಬಸವಮಂಟಪದ ನೂತನ ವಸತಿಗೃಹಗಳನ್ನು ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಲೋಕಾಸಭೆ ಸದಸ್ಯ ಗೋವಿಂದ ಎಂ. ಕಾರಜೋಳ, ಶಾಸಕರಾದ ಎಂ. ಚಂದ್ರಪ್ಪ, P .ಸಿ. ವೀರೇಂದ್ರ ಪಪ್ಪಿ,, ಟಿ. ರಘುಮೂರ್ತಿ, ಬಿ.ಜಿ. ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ, ವಿಧಾನಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಚಿದಾನಂದಗೌಡ, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಶಾಸಕರಾದ ಪಿ.ರಮೇಶ್, ಎಂ.ಬಿ.ತಿಪ್ಪೇರುದ್ರಪ್ಪ, ಎ.ವಿ. ಉಮಾಪತಿ, ಟಿ.ಹೆಚ್. ಬಸವರಾಜು ಭಾಗವಹಿಸುವರು. ಕಾರ್ಯ ಕ್ರಮಕ್ಕೆ ಆಡಳಿತ ಮಂಡಳಿ ಸದಸ್ಯರಾದ ಡಾ. ಪಿ.ಎಸ್. ಚಂದ್ರಶೇಖರ್, ನಾಡಿನ ಶಾಖಾ-ಖಾಸಾ ಮಠಗಳ ಹಾಗೂ ವಿವಿಧ ಸಮಾಜಗಳ ಪೂಜ್ಯರುಗಳು ಹಾಗೂ ಗುರು ಚರಮೂರ್ತಿಗಳು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
Views: 0