ಚಿತ್ರದುರ್ಗ ಆ. 10
ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್
ಚಿತ್ರದುರ್ಗ ನಗರದ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳ ಮೇಲೆ ಕಳಂಕವನ್ನು ತರಲು ಒಳ ಸಂಚು ನಡೆಸುತ್ತಿದ್ದು ಇದನ್ನು ಖಂಡಿಸಿ ಆ. 12 ರ ಮಂಗಳವಾರದಂದು ಚಿತ್ರದುರ್ಗ ನಗರದಲ್ಲಿ ಬೃಹತ್ ಜಾಥಾವನ್ನು ನಡೆಸಲಾಗುವುದೆಂದು ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ರೂಪ ಜನಾರ್ಧನ್, ಕಾರ್ಯಾಧ್ಯಕ್ಷರಾದ ಸಿ.ಬಿ.ನಾಗರಾಜ್ ಹಾಗೂ ನಾಗರಾಜ್ ಸಂಗಂ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಯಿಂದ ನಗರದ ನೀಲಕಂಠೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಜಿಲ್ಲೆಯ ಆರು ತಾಲ್ಲೂಕುಗಳಿಂದ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ಈ ಜಾಥಾದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ವೃತ್ತದಲ್ಲಿ ಬಹಿರಂಗ ಸಭೆಯನ್ನು ನಡೆಸುವುದರ ಮೂಲಕ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲಾಗುವುದು. ಇದಾದ ನಂತರ ಜಿಲ್ಲಾಧಿಕಾರಿಯವರಿಗೆ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆವತಿಯಿಂದ ಮನವಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
Views: 7