ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ 2017-18ನೇ ಸಾಲಿನಿಂದ 2023-24ನೇ ಸಾಲಿನವರೆಗೆ ಮಾನ್ಯತೆಯನ್ನು ನವೀಕರಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ: ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ 2017-18ನೇ ಸಾಲಿನಿಂದ 2023-24ನೇ ಸಾಲಿನವರೆಗೆ ಮಾನ್ಯತೆಯನ್ನು ನವೀಕರಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿ, ಪ್ರಾಚಾರ್ಯರು ಅರ್ಜಿಯನ್ನು ಆಗಸ್ಟ್ 31 ರೊಳಗೆ ಇಲಾಖಾ ಜಾಲತಾಣ www.pue.karnataka.gov.in ಆನ್‍ಲೈನ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2740277 ಸಂಪರ್ಕಿಸಬಹುದೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.