Karnataka ESCOMs Online Services Down: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆಗಾಗಿ, ಬೆಸ್ಕಾಂ ಸೇರಿದಂತೆ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳ ಆನ್‌ಲೈನ್ ಸೇವೆ ಅ.24ರ ರಾತ್ರಿ 8 ರಿಂದ ನಾಳೆ ಮಧ್ಯಾಹ್ನ 1 ಗಂಟೆಯವರೆಗೆ ಸ್ಥಗಿತಗೊಳ್ಳಲಿವೆ. ಈ ಸಮಯದಲ್ಲಿ ಯುವದೇ ಸೇವೆ ಸಿಗಲ್ಲ.
ಬೆಂಗಳೂರು (ಅ.24): ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ ಹಿನ್ನೆಲೆ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳ ಆನ್‌ಲೈನ್ ಸೇವೆಗಳು ಇಂದು ರಾತ್ರಿ 8 ಗಂಟೆಯಿಂದ ನಾಳೆ ಮಧ್ಯಾಹ್ನ 1 ಗಂಟೆವರೆಗೆ ಪೂರ್ತಿ ಸ್ಥಗಿತಗೊಳ್ಳಲಿವೆ.
ಯಾವ್ಯಾವ ಸೇವೆ ಸ್ಥಗಿತ?
ಈ ಕುರಿತು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು,ಬೆಸ್ಕಾಂ, ಜೆಸ್ಕಾಂ, ಸೆಸ್ಕಾ, ಮೆಸ್ಕಾಂ, ಹೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆ ಸ್ಥಗಿತಗೊಳ್ಳಲಿವೆ ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ, ಹೊಸ ಸಂಪರ್ಕ ಅರ್ಜಿ, ಆನ್‌ಲೈನ್ ದೂರು ನೋಂದಣಿ ಸೇರಿದಂತೆ ಯಾವುದೇ ಆನ್‌ಲೈನ್ ಸೇವೆ ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಗ್ರಾಹಕರು ತಮ್ಮ ಕೆಲಸಗಳನ್ನು ಮುಂಚಿತವಾಗಿ ಪೂರೈಸಿಕೊಳ್ಳಬೇಕು ಎಂದು ಬೆಸ್ಕಾಂ ಕೋರಿದೆ.
ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ:
ಆದರೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ ಸಾಮಾನ್ಯವಾಗಿ ವಿದ್ಯುತ್ ಸರಬರಾಜು ಮುಂದುವರಿಯಲಿದೆ. ತಾಂತ್ರಿಕ ನಿರ್ವಹಣೆ ಕಾರ್ಯ ಮುಗಿದ ತಕ್ಷಣ ಸೇವೆಗಳು ಪುನರಾರಂಭವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಹಕರ ಅನಾನುಕೂಲಕ್ಕೆ ಕ್ಷಮೆಯಾಚಿಸುತ್ತೇವೆ. ತುರ್ತು ನಿರ್ವಹಣೆ ಅನಿವಾರ್ಯವಾಗಿದೆ ಎಂದು ತಿಳಿಸಿದೆ. ಗ್ರಾಹಕರು ಆಫ್‌ಲೈನ್ ಕಚೇರಿಗಳ ಮೂಲಕ ಸೇವೆ ಪಡೆಯಬಹುದು.
Views: 5