
Indian Oil Message: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನರು ಕೆಲವೊಂದು ವಿಚಾರಗಳ ಬಗ್ಗೆ ಆತಂಕಕ್ಕೆ ಒಳಗಾಗಿದ್ದಾರೆ. ಪೆಟ್ರೋಲ್, ಡಿಸೇಲ್, ಗ್ಯಾಸ್ ಪೂರೈಕೆಯ ಬಗ್ಗೆಯೂ ಜನರಲ್ಲಿ ಆತಂಕ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಜನರು ಭಯಭೀತರಾಗಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಖರೀದಿಗೆ ಮುಂದಾಗಿದ್ದಾರೆ.
ಜನ ಮುಗಿ ಬಿದ್ದು ಪೆಟ್ರೋಲ್, ಡಿಸೇಲ್, ಗ್ಯಾಸ್ ಖರೀದಿಗೆ ಮುಂದಾಗುತಿರುವ ಹಿನ್ನೆಲೆಯಲ್ಲಿ ದೇಶದ ಅತಿದೊಡ್ಡ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪ್ರಮುಖ ಮಾಹಿತಿಯನ್ನು ಹೊರ ಹಾಕಿದೆ. ಜನರು ಭಯಭೀತರಾಗಿ ತೈಲ ಮತ್ತು ಎಲ್‌ಪಿಜಿ ಖರೀದಿಸಬೇಡಿ ಎಂದು ಮನವಿ ಮಾಡಿದೆ. ನಮ್ಮಲ್ಲಿ ಸಾಕಷ್ಟು ತೈಲ ಸಂಗ್ರಹವಿದೆ ಮತ್ತು ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದೆ.
ಆಪರೇಷನ್ ಸಿಂಧೂರ್ ಅಡಿಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿದೆ. ಇದಾದ ನಂತರ, ಕಾರಿನ ಟ್ಯಾಂಕ್ ತುಂಬಿಸಿಕೊಳ್ಳಿ ಮನೆಯಲ್ಲಿ ಪಡಿತರವನ್ನು ಸಂಗ್ರಹಿಸಿಟ್ಟುಕೊಳ್ಳಿ ಇನ್ನು ಮೆಸೇಜ್ ಗಳು ವೈರಲ್ ಆಗುತ್ತಿತ್ತು.
ಎಲ್ಲಾ ಮಳಿಗೆಗಳಲ್ಲಿ ತೈಲ ಮತ್ತು ಎಲ್‌ಪಿಜಿ ಲಭ್ಯವಿದೆ :
ಈ ಸಂದೇಶಗಳು ವೈರಲ್ ಆಗುತ್ತಿದ್ದಂತೆಯೇ ಪೆಟ್ರೋಲ್ ಪಂಪ್‌ಗಳಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಈಗ ಇಂಡಿಯನ್ ಆಯಿಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಪೆಟ್ರೋಲ್ ಗ್ಯಾಸ್ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಎಲ್ಲಾ ಮಳಿಗೆಗಳಲ್ಲಿ ಇಂಧನ ಮತ್ತು ಎಲ್‌ಪಿಜಿ ಸುಲಭವಾಗಿ ಲಭ್ಯವಿದೆ ಎಂದು ಹೇಳಿದೆ. ಪೆಟ್ರೋಲ್, ಗ್ಯಾಸ್ ನ ನಿರಂತರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಯಾವುದೇ ಸಂದರ್ಭದಲ್ಲೂ ತೈಲದ ಕೊರತೆ ಉಂಟಾಗುವುದಿಲ್ಲ.
ಮಿಲಿಟರಿ ಕ್ರಮವು ಇಂಧನ ಕೊರತೆಗೆ ಕಾರಣವಾಗಬಹುದು ಎಂದು ಜನರು ಭಯಪಡುತ್ತಾರೆ. ಆದರೆ ಯಾವುದೇ ಸಂದರ್ಭದಲ್ಲೂ ಇಂಧನ ಕೊರತೆ ಉಂಟಾಗುವುದಿಲ್ಲ ಎಂದು ಇಂಡಿಯನ್ ಆಯಿಲ್ ಭರವಸೆ ನೀಡಿದೆ. ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ಕಂಪನಿ ಜನರಲ್ಲಿ ಮನವಿ ಮಾಡಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1