ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ನಲ್ಲಿ ಓವಲ್ ಇನ್ವಿನ್ಸಿಬಲ್ಸ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಬರೋಬ್ಬರಿ 226 ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ. ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಲ್ಷ್ ಫೈರ್ ತಂಡವು ಓವಲ್ ಇನ್ವಿನ್ಸಿಬಲ್ಸ್ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು.
ಅದರಂತೆ ಮೊದಲು ಬ್ಯಾಟ್ ಮಾಡಿದ ಓವಲ್ ಇನ್ವಿನ್ಸಿಬಲ್ಸ್ ಪರ ಜೋರ್ಡನ್ ಕಾಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 29 ಎಸೆತಗಳನ್ನು ಎದುರಿಸಿದ ಕಾಕ್ಸ್ 10 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 86 ರನ್ ಚಚ್ಚಿದರು. ಈ ವಿಸ್ಫೋಟಕ ಬ್ಯಾಟಿಂಗ್ ನೆರವಿನೊಂದಿಗೆ ಓವಲ್ ಇನ್ವಿನ್ಸಿಬಲ್ಸ್ ತಂಡವು 100 ಎಸೆತಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 226 ರನ್ಗಳು.
ಈ 226 ರನ್ಗಳೊಂದಿಗೆ ದಿ ಹಂಡ್ರೆಡ್ ಲೀಗ್ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ದಾಖಲೆ ಓವಲ್ ಇನ್ವಿನ್ಸಿಬಲ್ಸ್ ತಂಡದ ಪಾಲಾಯಿತು. ಇದಕ್ಕೂ ಮುನ್ನ ಈ ರೆಕಾರ್ಡ್ ಮ್ಯಾಂಚೆಸ್ಟರ್ ಒರಿಜಿನಲ್ಸ್ (208 ರನ್ಸ್) ತಂಡದ ಹೆಸರಿನಲ್ಲಿತ್ತು. ಇದೀಗ 226 ರನ್ಗಳಿಸಿ ಹೊಸ ಇತಿಹಾಸ ಬರೆಯುವಲ್ಲಿ ಓವಲ್ ಇನ್ವಿನ್ಸಿಬಲ್ಸ್ ತಂಡ ಯಶಸ್ವಿಯಾಗಿದೆ.
ಇನ್ನು 227 ರನ್ಗಳ ಕಠಿಣ ಗುರಿ ಬೆನ್ನತ್ತಿದ ವೆಲ್ಷ್ ಫೈರ್ ತಂಡವು 93 ಎಸೆತಗಳಲ್ಲಿ 143 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಓವಲ್ ಇನ್ವಿನ್ಸಿಬಲ್ಸ್ ತಂಡವು 83 ರನ್ಗಳ ಭರ್ಜರಿ ಜಯ ಸಾಧಿಸಿದೆ.
Source: TV9 Kannada, Youtube
Views: 8