PBKS vs LSG, IPL 2023: ಐಪಿಎಲ್​ನಲ್ಲಿಂದು ಪಂಜಾಬ್-ಲಖನೌ ಮುಖಾಮುಖಿ: ಅಗ್ರಸ್ಥಾನದ ಮೇಲೆ ರಾಹುಲ್ ಕಣ್ಣು

PBKS vs LSG, IPL 2023: ಐಪಿಎಲ್​ನಲ್ಲಿಂದು ಪಂಜಾಬ್-ಲಖನೌ ಮುಖಾಮುಖಿ: ಅಗ್ರಸ್ಥಾನದ ಮೇಲೆ ರಾಹುಲ್ ಕಣ್ಣು
PBKS vs LSG

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಹತ್ವದ ಘಟ್ಟದತ್ತ ತಲುಪುತ್ತಿದೆ. ಮೈನಸ್ ರನ್​ರೇಟ್​ನಲ್ಲಿರುವ ತಂಡ ಪ್ಲಸ್ ರನ್​ರೇಟ್​ಗಾಗಿ ಪರದಾಡುತ್ತಿದ್ದು ಒಂದೊಂದು ಗೆಲುವು ಕೂಡ ಮುಖ್ಯವಾಗುತ್ತಿದೆ. ಇಂದು ಐಪಿಎಲ್ 2023 ರಲ್ಲಿ (IPL 2023) ಹೈವೋಲ್ಟೇಜ್ ಪಂದ್ಯ ಏರ್ಪಡಿಸಲಾಗಿದೆ. ಮೊಹಾಲಿಯ ಐಎಸ್ ಬಿಂದ್ರ ಸ್ಟೇಡಿಯಂನಲ್ಲಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಹಾಗೂ ಕೆಎಲ್ ರಾಹುಲ್ (KL Rahul) ನೇತೃತ್ವದ ಲಖನೌ ಸೂಪರ್ ಜೇಂಟ್ಸ್ (PBKS vs LSG) ತಂಡ ಮುಖಾಮುಖಿ ಆಗುತ್ತಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಉಭಯ ತಂಡಗಳಿಗೆ ಈ ಪಂದ್ಯ ಮುಖ್ಯವಾಗಿದೆ.

ಪಂಜಾಬ್ ಕಿಂಗ್ಸ್:

ಪಂಜಾಬ್ ಆಡಿದ ಏಳು ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಮೂರರಲ್ಲಿ ಸೋತಿದೆ. ಪಂಜಾಬ್ ತಂಡದಲ್ಲಿ ಒಬ್ಬ ಆಟಗಾರ ವೈಫಲ್ಯ ಅನುಭವಿಸಿದರೆ ಮತ್ತೊಬ್ಬ ಪ್ಲೇಯರ್ ಪಂದ್ಯವನ್ನು ಗೆಲ್ಲಿಸಿಕೊಡುತ್ತಿದ್ದಾರೆ. ಶಿಖರ್ ಧವನ್ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿದ್ದು ಇಂದು ಕಣಕ್ಕಿಳಿಯುವ ಸಾಧ್ಯತೆ ಇದೆ. ಮ್ಯಾಥ್ಯೂ ಶಾರ್ಟ್, ಹರ್ಪ್ರೀತ್ ಸಿಂಗ್ ಸಿಖಂದರ್ ರಾಜಾ, ಶಾರುಖ್ ಖಾನ್ ಫಾರ್ಮ್​ನಲ್ಲಿದ್ದಾರೆ. ಸ್ಯಾಮ್ ಕುರ್ರನ್ ಡೆತ್ ಓವರ್​​ನಲ್ಲಿ ಅಪಾಯಕಾರಿ ಆಗಿ ಗೋಚರಿಸಿದ್ದಾರೆ. ಹಿಂದಿನ ಪಂದ್ಯದಲ್ಲಿ ಇವರು ಕೇವಲ 29 ಎಸೆತಗಳಲ್ಲಿ 55 ರನ್ ಚಚ್ಚಿದ್ದರು. ಲಿವಿಂಗ್​ಸ್ಟೋನ್ ಇನ್ನಷ್ಟೆ ಮಿಂಚಬೇಕಿದೆ. ಬೌಲಿಂಗ್​ನಲ್ಲಿ ಅರ್ಶ್​ದೀಪ್ ಸಿಂಗ್ ಮಾರಕವಾಗಿದ್ದಾರೆ. ನೇಥನ್ ಎಲಿಸ್, ರಾಹುಲ್ ಚಹರ್, ಹರ್ಪ್ರೀತ್ ಬ್ರರ್ ಪ್ರಮುಖ ಬೌಲರ್​ಗಳಾಗಿದ್ದಾರೆ.

IPL 2023: ಇನ್ಮುಂದೆ ಇರುವುದು RCB ತಂಡದ ಅಸಲಿ ಆಟ..!

ಲಖನೌ:

ಲಖನೌ ತಂಡ ಆಡಿದ ಏಳು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ಸಾಧಿಸಿ ಕೇವಲ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹಿಂದಿನ ಪಂದ್ಯದಲ್ಲಿ ಜಿಟಿ ವಿರುದ್ಧ ಸುಲಭ ಟಾರ್ಗೆಟ್ ಇದ್ದರೂ ಗೆಲ್ಲುವಲ್ಲಿ ವಿಫಲವಾಗಿತ್ತು. ನಾಯಕ ಕೆಎಲ್ ರಾಹುಲ್ ಹಾಗೂ ಖೈಲ್ ಮೇಯರ್ಸ್ ತಂಡಕ್ಕೆ ಭರ್ಜರಿ ಆರಂಭ ಒದಗಿಸುತ್ತಿದ್ದಾರೆ. ಆಯುಷ್ ಬದೋನಿ, ಮಾರ್ಕಸ್ ಸ್ಟಾಯಿನಿಸ್ ಹಾಗೂ ನಿಕೋಲಸ್ ಪೂರನ್ ಮಧ್ಯಮ ಕ್ರಮಾಂಕದ ಬಲವಾಗಿದ್ದು ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸುತ್ತಿದ್ದಾರೆ. ದೀಪಕ್ ಹೂಡ ಕಡೆಯಿಂದ ಉತ್ತಮ ಆಟ ಬರುತ್ತಿಲ್ಲ. ಕ್ರುನಾಲ್ ಪಾಂಡ್ಯ ಕೂಡ ಆಲ್ರೌಂಡ್ ಪ್ರದರ್ಶನ ತೋರಬೇಕಿದೆ. ಬೌಲಿಂಗ್​ನಲ್ಲಿ ನವೀನ್ ಉಲ್ ಹಖ್, ಆವೇಶ್ ಖಾನ್, ರವಿ ಬಿಷ್ಟೋಯಿ ಹಾಗೂ ಅಮಿತ್ ಮಿಶ್ರಾ ಉತ್ತಮ ಫಾರ್ಮ್​ನಲ್ಲಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಅಥರ್ವ ಟೈಡೆ, ಮ್ಯಾಥ್ಯೂ ಶಾರ್ಟ್, ಹರ್ಪ್ರೀತ್ ಸಿಂಗ್ ಭಾಟಿಯಾ, ಸಿಖಂದರ್ ರಾಜಾ, ಸ್ಯಾಮ್ ಕುರ್ರನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ಕಗಿಸೋ ರಬಾಡ, ರಾಹುಲ್ ಚಾಹರ್, ಅರ್ಶ್ದೀಪ್ ಸಿಂಗ್, ಪ್ರಭಾಸಿಮ್ರಾನ್ ಸಿಂಗ್, ನೇಥನ್ ಎಲಿಸ್, ಮೋಹಿತ್ ರಾಥೀ, ರಿಷಿ ಧವನ್, ಭಾನುಕಾ ರಾಜಪಕ್ಸೆ, ಗುರ್ನೂರ್ ಬ್ರಾರ್, ಬಲ್ತೇಜ್ ಸಿಂ , ಲಿಯಾಮ್ ಲಿವಿಂಗ್​ಸ್ಟೋನ್, ವಿಧ್ವತ್ ಕಾವೇರಪ್ಪ, ಶಿವಂ ಸಿಂಗ್.

ಲಖನೌ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್ (ನಾಯಕ), ಖೈಲ್ ಮೇಯರ್ಸ್, ದೀಪಕ್ ಹೂಡಾ, ಕ್ರುನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಮಾರ್ಕ್ ವುಡ್, ಜಯದೇವ್ ಉನಾದ್ಕಟ್, ರವಿ ಬಿಷ್ಣೋಯ್, ಅವೇಶ್ ಖಾನ್, ಕೃಷ್ಣಪ್ಪ ಗೌತಮ್, ಪ್ರೇರಕ್ ಮಂಕಡ್, ಸ್ವಪ್ನಿಲ್ ಸಿಂಗ್, ನವೀನ್-ಉಲ್-ಹಕ್, ಯಶ್ ಠಾಕೂರ್, ಡೇನಿಯಲ್ ಸಾಮ್ಸ್, ರೊಮಾರಿಯೋ ಶೆಫರ್ಡ್, ಯುದ್ವೀರ್ ಸಿಂಗ್ ಚರಕ್, ಮಯಾಂಕ್ ಯಾದವ್, ಅಮಿತ್ ಮಿಶ್ರಾ, ಮನನ್ ವೋಹ್ರಾ.

ಪಂದ್ಯ ಆರಂಭ: ಸಂಜೆ 7:30ಕ್ಕೆ

ಸ್ಥಳ: ಐಎಸ್ ಬಿಂದ್ರ ಸ್ಟೇಡಿಯಂ, ಮೊಹಾಲಿ

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/punjab-kings-will-play-host-to-lucknow-super-giants-in-match-38-of-indian-premier-legaue-2023-kannada-news-vb-au48-565283.html

Leave a Reply

Your email address will not be published. Required fields are marked *