ಅಲ್ಪಸಂಖ್ಯಾತ ವಸತಿ ನಿಲಯಗಳ ಸಿಬ್ಬಂದಿ ನೇಮಕಾತಿ ಸಮಸ್ಯೆಗೆ ಶಾಶ್ವತ ಪರಿಹಾರ ಶೀಘ್ರದಲ್ಲೇ : ಜಮೀರ್ ಅಹ್ಮದ್.

ಬೆಳಗಾವಿ: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 405 ವಸತಿ ನಿಲಯಗಳಲ್ಲಿನ ಅಗತ್ಯವಿರುವ ನಿಲಯಗಳಿಗೆ ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯ ಒದಗಿಸಲು ಟೆಂಡರ್ ಕರೆಯಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ತಿಳಿಸಿದರು.

ಕಾಂಗ್ರೆಸ್ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆಯ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶನಾಲಯದ ವೃಂದ ಮತ್ತು 2011ರ ನೇಮಕಾತಿ ನಿಯಮಗಳ ಪರಿಷ್ಕರಣೆ ಪ್ರಕ್ರಿಯೆಯಲ್ಲಿದೆ. ನಿಯಮಗಳು ಪರಿಷ್ಕರಣೆಗೊಂಡ ನಂತರ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೆ ಸೇರ್ಪಡೆವಾಗಿ, ವಿದ್ಯಾರ್ಥಿ ನಿಲಯಗಳ ಸುಗಮ ಕಾರ್ಯನಿರ್ವಹಣೆ, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಖಾಲಿ ಇರುವ ನಿಲಯಪಾಲಕರ ಹುದ್ದೆಗಳಿಗೆ ಇಲಾಖೆಯೇ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೆಚ್ಚುವರಿ ಪ್ರಭಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

Leave a Reply

Your email address will not be published. Required fields are marked *